Headlines

ಕಿಲ್ಲರ್ ಕಾಡಾನೆ ಸೆರೆಯಾದರೂ ಮುಂದುವರಿದ ಆತಂಕ; ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ !

ಕಿಲ್ಲರ್ ಕಾಡಾನೆ ಸೆರೆಯಾದರೂ ಮುಂದುವರಿದ ಆತಂಕ; ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ !


ಚಿಕ್ಕಮಗಳೂರಿನ 12 ಗ್ರಾಮಗಳಿಗೆ ಗ್ರಾಮಗಳಲ್ಲಿ ನಿಷೇಧಾಜ್ಞೆ !

ಚಿಕ್ಕಮಗಳೂರು, ಫೆಬ್ರವರಿ 25: ತಾಲೂಕಿನಲ್ಲಿ ಕಾಡಾನೆಗಳ ಆತಂಕ ಹೆಚ್ಚಿದ ಆಡಳಿತವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಾಲೂಕಿನ (ಚಿಕ್ಕಮಗಳೂರು) ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ, ಸಂಜೆ 4 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ನಾಳೆಯವರೆಗೆ (ಫೆಬ್ರವರಿ 26) ನಿಷೇದಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಸೂಚಿಸಲಾಗಿದೆ.

ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಇಬ್ಬರು ಬಲಿ

ಕೆಲವು ದಿನಗಳ ಹಿಂದಷ್ಟೇ ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮದಲ್ಲಿ ನಾಗೇಶ್ ಗೌಡ ಅವರಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50 ಕಾರ್ಮಿಕ ಯಲ್ಲಪ್ಪ ಆನೆ ದಾಳಿಗೆ ಬಲಿಯಾಗಿದ್ದರು. ಈ ಘಟನೆ ನಡೆದಿದ್ದು ಒಂದು ವಾರದಲ್ಲೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಹೊಸಪೇಟೆ ಮೂಲದ ಬೋರಮ್ಮ (34)ಎಂಬ ಕಾರ್ಮಿಕ ಮಹಿಳೆಯೂ ಅಸುನೀಗಿದ್ದರು. ಈ ಘಟನೆಗಳ ಬಳಿಕ ವೇಗದಿಂದ ಸಾಗಿದ ಆನೆ ಸೆರೆ ಕಾರ್ಯಾಚರಣೆಯು ಯಶಸ್ವಿಗೊಂಡು ಕಿಲ್ಲರ್ ಸಲಗ ಸೆರೆಯಾಗಿತ್ತು. ಇದರಲ್ಲೇ ಅರಣ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಮುಂದೆ ಈ ರೀತಿಯ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ

ಇದನ್ನೂ ಓದಿ ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಒಂಟಿ ಸಲಗ

ಎಲ್ಲೆಲ್ಲಿ ನಿಷೇಧ ಜಾರಿ?

ಚಿಕ್ಕಮಗಳೂರು ತಾಲ್ಲೂಕಿನ ಮೂಗ್ತಿಹಳ್ಳಿ, ವಸ್ತಾರೆ, ಮತ್ತಾವರ, ದಂಬದಹಳ್ಳಿ, ನಲ್ಲೂರು, ಕಾರೇಮನೆ, ಉಕ್ಕುಂದ, ಗಡಬನಹಳ್ಳಿ, ಜೋಳದಾಳು, ಚಿಕ್ಕೊಳಲೆ, ತಳಿಹಳ್ಳ, ಶಿರಗುಂದದಲ್ಲಿ ಜನರ ಸುರಕ್ಷತೆಗಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿಶೇಷವಾಗಿ ಚಿಕ್ಕೊಳಲೆ ಅರಣ್ಯ ಪ್ರದೇಶದಲ್ಲಿ ಎರಡು ಕಾಡಾನೆಗಳು ಬೀಡುಬಿಟ್ಟಿರುವುದು ಇರುವುದು, ಅವುಗಳ ಚಲನವಲನಗಳ ಮೇಲೆ ಅರಣ್ಯ ಇಲಾಖೆ ಹದ್ದಿನಕಣ್ಣು ಇಟ್ಟಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶ್ವಾನದ ಸಹಾಯದಿಂದ ಕಾಡಾನೆಗಳ ಸಂಚಾರದ ದಿಕ್ಕು ಹಾಗೂ ಚಲನೆಯನ್ನು ಗಮನಿಸಲಾಗುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಅನಾವಶ್ಯಕ ಸಂಚಾರ ಮಾಡದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಕಾಫಿ ತೋಟಗಳಿಗೆ ತೆರಳುವವರು ತಾತ್ಕಾಲಿಕವಾಗಿ ತಡೆಯಲು ಸೂಚಿಸಲಾಗಿದೆ. ರಾತ್ರಿ ವೇಳೆ ಮನೆಗಳು ಹೊರಗೆ ಹೋಗದಂತೆ ಹಾಗೂ ಜನರು ಮಾತ್ರ ಸಂಚರಿಸುವಂತೆ ಎಚ್ಚರಿಕೆ ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಉಂಟಾದ ತಕ್ಷಣ ಅರಣ್ಯ ಇಲಾಖೆ ಅಥವಾ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *