ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್‌ ಬರೆದಿಟ್ಟು ಗ್ರಾ ಪಂ ನೀರುಗಂಟಿ ಆತ್ಮಹತ್ಯೆ

ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್‌ ಬರೆದಿಟ್ಟು ಗ್ರಾ ಪಂ ನೀರುಗಂಟಿ ಆತ್ಮಹತ್ಯೆ


ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್‌ ಬರೆದಿಟ್ಟು ಗ್ರಾಪಂ ನೀರುಗಂಟಿ ಆತ್ಮಹತ್ಯೆ

ಚಿಕ್ಕಮಗಳೂರು, ಮಾರ್ಚ್ 15: ಡೆತ್‌ನೋಟ್‌ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ (ಆತ್ಮಹತ್ಯೆ) ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆನೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11 ತಿಂಗಳಿನಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೆತ್ನೋಟ್ನಲ್ಲಿ ಏನಿದೆ?

ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ. ಹಾಗೂ ಸಂಘದವರು ಮನೆಗೆ ಬಂದು ಹಣ ಕಟ್ಟಲು ನನಗೆ ನಮ್ಮ ಮನೆಯವರಿಗೆ ತೊಂದರೆ ಕೊಡುತ್ತಿದ್ದಾರೆ. ನನಗೆ ತುಂಬಾ ಮನಸ್ಸಿಗೆ ಬೇಜಾರಾಗಿದೆ.

ಇದನ್ನೂ ಓದಿ: ಬಹಿಷ್ಕಾರಕ್ಕೆ ಮನನೊಂದು ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಫೈನಾನ್ಸ್‌ನಲ್ಲಿ ಸಾಲ ಮಾಡಿದೆ, ಸಂಬಳ ನೀಡಿದ್ದಕ್ಕೆ ಸಾಲಕಟ್ಟಲು ಆಗುತ್ತಿಲ್ಲ. RBL, SKS, ಗ್ರಾಮೀಣಕೂಟ, ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಮನೆಯವರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಕೆಲಸ ಮಾಡಲು ಬಿಡುತ್ತಿಲ್ಲವೆಂದು ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಹಾಸ್ಟೆಲ್ ವಾರ್ಡನ್ ಮನೆಯಲ್ಲಿ ನೇಣಿಗೆ ಶರಣು

ಹಾಸನ ನಗರದ ದಾಸರಕೊಪ್ಪಲಿನಲ್ಲಿ ಹಾಸ್ಟೆಲ್ ವಾರ್ಡನ್ ಲೋಕೇಶ್ (45) ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಮುಂಬಡ್ತಿ ಪಡೆದು ಚನ್ನರಾಯಪಟ್ಟಣ ಹಾಸ್ಟೆಲ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಲೋಕೇಶ್ ನೇಣಿಗೆ ಶರಣಾಗಿದ್ದಾರೆ. ಹಾಸನದ ಪೊಲೀಸ್ ಠಾಣಾ ಮೊಹಲ್ಲಾ ಪ್ರಕರಣ ದಾಖಲಾಗಿದೆ.

KSRTC ಬಸ್ ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಿಂದ ಕೊಳ್ಳೇಗಾಲಕ್ಕೆ ಬರುತ್ತಿದ್ದ ಬಸ್ ನಲ್ಲಿ ನಡೆದಿದೆ. ಕೊಳ್ಳೇಗಾಲದ ವಡ್ಡರ ದೊಡ್ಡಿಯ ಆರೋಗ್ಯ ಸ್ವಾಮಿ ಮೃತ ದುರ್ದೈವಿ.

ಇದನ್ನೂ ಓದಿ: ಮದುವೆಯಾಗಿ ಒಂದು ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ

ಬಸ್ ನಿಲ್ದಾಣಕ್ಕೆ ಬಂದಾಗ ಎಲ್ಲಾ ಪ್ರಯಾಣಿಕರು ಇಳಿದಿದ್ದಾರೆ. ಆದರೆ ಆರೋಗ್ಯ ಸ್ವಾಮಿ ಮಾತ್ರ ಬಸ್ ನಲ್ಲೇ ಕುಳಿತಿದ್ದರು. ಬಸ್ ನಿಂದ ಕಂಡಕ್ಟರ್ ಇಳಿಸಲು ಮುಂದಾದ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣವೇ 112 ಕರೆ ಮಾಡಿ ಬಸ್ ನಿರ್ವಾಹಕರಿಗೆ ಮಾಹಿತಿ ಇದೆ. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶಿಲನೆ ಮಾಡಿದ್ದಾರೆ. ಮೃತದೇಹವನ್ನ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಳ್ಳೇಗಾಲ ಪಟ್ಟಣ ಠಾಣಾ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *