ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ನಲುಗಿದ ಮಲೆನಾಡು!

ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ನಲುಗಿದ ಮಲೆನಾಡು!


ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ನಲುಗಿದ ಮಲೆನಾಡು!

ಚಿಕ್ಕಮಗಳೂರು, ಮಾರ್ಚ್ 29: ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಆರ್ಭಟ ಮುಂದುವರಿದಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್‌ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿತ್ತು. ಚಿಕ್ಕಮಗಳ ನಗರದಲ್ಲೂ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮಳೆಯಿಂದ ಪರದಾಡಿದ ದೃಶ್ಯಗಳು ಕಂಡುಬಂದಿವೆ. ಬಿರುಗಾಳಿ ಮಳೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪಶ್ಚಿಮ ಘಟ್ಟಗಳ ನಡುವೆ ಮುಂದಿನ ಏಪ್ರಿಲ್ 4 ರವರೆಗೆ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *