ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನಲ್ಲಿ ಹೊಳೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಪತಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿರುವ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಚಿಕ್ಕಮಗಳೂರು : ನರ್ಸ್ ಒಬ್ಬರು ಹೊಳೆಗೆ ಹಾರಿ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು 30 ವರ್ಷದ ರಾನ್ಯಾ ಬೇಸಿಲ್ ಎಂದು ಗುರುತಿಸಲಾಗಿದೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಪತಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿರುವ ರಾನ್ಯಾ ಬೇಸಿಲ್ ಅವರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ನಿವಾಸಿಯಾಗಿದ್ದು, ಹೊಳೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ.

ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿ ರಾನ್ಯಾ ಸಾವಿಗೆ ಶರಣಾಗಿದ್ದು, ಅವರು ಶಿವಮೊಗ್ಗದ ನಗರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದ ರನ್ಯಾ ಮತ್ತೆ ಮನೆಯಿಂದ ವಾಪಸ್ ಹೋಗಿ ಹೊಳೆಗೆ ಹಾರಿ ಶರಣಾಗಿದ್ದಾರೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source link
ಚಿಕ್ಕಮಗಳೂರು: ನಾರಾಯಣ ಹೃದಯಾಲಯದ ನರ್ಸ್ ಹೊಳೆಗೆ ಹಾರಿ ಸಾವಿಗೆ ಶರಣು