ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್ಚಿತ್ರದ ಕ್ರೆಡಿಟ್ ಮೂಲ: tv9
ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (ಚಿಕ್ಕಮಗಳೂರು) ನಗರದ ತಿಲಕ್ ಪಾರ್ಕ್ ಸಮೀಪ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಎಫ್ ಐಆರ್‌ಗಳನ್ನು ದಾಖಲಿಸಲಾಗಿದೆ. ಕಲ್ಲು ತೂರಾಟ ಮಾಡಿದವರು ಹಾಗೂ ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದವರ ವಿರುದ್ಧವೂ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಧಾ ಎಂಬವರ ಮನೆಯವರ ಮೇಲೆ ಕಲ್ಲು ಎಸೆದ ಆರೋಪದ ಮೇರೆಗೆ ಹುಸೇನ್ ಮತ್ತು ರಿಯಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲ್ಲು ತೂರಾಟ ನಡೆಸಿದವರನ್ನು ಹಿಡಿದ ಶಾಮ್ ಮತ್ತು ಸಂತೋಷ್ ಮೇಲೂ ಹಲ್ಲೆ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಶಾಮ್ ಅವರು ಬಜರಂಗದಳ ಹಾಸನ ವಿಭಾಗ ಸಹ ಸಂಚಾಲಕರಾಗಿದ್ದರೆ, ಸಂತೋಷ್ ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿದ್ದಾರೆ.
ತಮ್ಮ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ಹುಸೇನ್ ನೀಡಿದ ದೂರಿನ ಪ್ರಕರಣ ದಾಖಲಾಗಿದೆ, ಪತ್ತೆಯಾಗಿರುವ ಆಕ್ಷದ್ ಮತ್ತು ಹಸೇನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಷದ್ ಹಾಗೂ ಹುಸೇನ್ ಮೇಲೆ BNS ಕಾಯ್ದೆಯ ವಿವಿಧ ಕಲಾಂಗಳ ಅಡಿ ಹಾಗೂ ಎಸ್‌ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಶಾಮ್ ಮತ್ತು ಸಂತೋಷ್ ವಿರುದ್ಧವೂ BNS ವಿವಿಧ ಕಲಂಗಳಡಿ ಕೇಸ್ ದಾಖಲಿಸಲಾಗಿದೆ.
ಈ ಸಂದರ್ಭದಲ್ಲಿ, ಹಿಂದೂಗಳ ಮೇಲೂ ಪ್ರಕರಣವನ್ನು ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದವರು ಹಾಗೂ ಎಸ್‌ಡಿಪಿಐ ಆಗ್ರಹ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಿಹೆಚ್‌ಪಿ ಮತ್ತು ಬಜರಂಗದಳದ ಮುಖಂಡರೂ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾತ್ರಿ ಬಸವನಹಳ್ಳಿ ಪೊಲೀಸ್ ಠಾಣೆ ಎದುರು ನೂರಾರು ಮಂದಿ ಜಮಾಯಿಸಿದ ಪರಿಣಾಮ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಚಿಕ್ಕಮಗಳೂರಿನ ತಿಲಕ್ ಪಾರ್ಕ್ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ
ತಿಲಕ್ ಪಾರ್ಕ್ ಸಮೀಪ ಹಿಂದೂಗಳ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ಕಲ್ಲು ತೂರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಬಜರಂಗದಳದವರು ಅವರನ್ನು ಹಿಡಿದು ಬಸವನಹಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೆ ಎಸ್ಡಿಪಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ಕ್ರಮಕ್ಕೆ ಬಂದಿತ್ತು.
ಇದನ್ನೂ ಓದಿ: ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟದಿಂದ ಘರ್ಷಣೆ, ವಿಜಯನಗರ ಬಡಾವಣೆ ಬಳಿ ಉದ್ವಿಗ್ನ ಪರಿಸ್ಥಿತಿ
ನಂತರ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆಗಳು ಹಾಗೂ ಎಸ್ ಡಿಪಿಐ ಸಂಘಟನೆಯ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಸದ್ಯ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ