‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು


'ನಿಮ್ಮ ಸಂತೋಷವಾಗಿ ಬದಲಾಗುತ್ತೆ': ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಚಿಕ್ಕಮಗಳೂರು, ಮಾ.31: ಜಿಲ್ಲೆಯ ಹೊಸಪೇಟೆ ಗ್ರಾಮದ ಸಂತೆ ಮೈದಾನದಲ್ಲಿ ಪುಸ್ತಕಗಳನ್ನು ಹಂಚುವ ಮೂಲಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮಂಗಳವಾರ (ಮಾ.31) ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಮೂಲದ ವೃದ್ಧ ಮತ್ತು ಮಧ್ಯವಯಸ್ಕ ವ್ಯಕ್ತಿ ಹೊಸ ಗ್ರಾಮದ ಸಂತೆಯಲ್ಲಿ ‘ನಿಮ್ಮ ಸಂತೋಷವಾಗಿ ಬದಲಾಗುತ್ತೆ’ ಎಂಬ ಪುಸ್ತಕಗಳನ್ನು ಹಂಚಲಾಗಿದೆ. ಮನೆ-ಮನೆಗೆ ತೆರಳಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಮತ್ತು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಇಬ್ಬರಿಗೂ ‘ಧರ್ಮದೇಟು’ ನೀಡುತ್ತಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಜನರು ಪ್ರಶ್ನೆ ಮಾಡುತ್ತಿರುವಂತೆಯೇ ಆರೋಪಿಗಳು ತಮ್ಮ ಓಮ್ನಿ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಬೈಕ್‌ನಲ್ಲಿ ಚೇಸ್ ಮಾಡಿ ಕಾರನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾದರು. ಈ ವೇಳೆ “ನೀವು ಕನ್ವರ್ಟ್ ಆಗಿದ್ದೀರಲ್ಲವೇ? ವಾಪಸ್ ಹಿಂದೂ ಧರ್ಮಕ್ಕೆ ಬನ್ನಿ” ಎಂದು ಕಾರ್ಯಕರ್ತರು ಅವರಿಗೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಶಾಕ್ : ಎಸ್ಕಾಂಗಳಿಂದ ಹಳೆ ಬಾಕಿ ವಸೂಲಿ; ಯಾವ ವರ್ಗಕ್ಕೆ ಎಷ್ಟು ದರ ಏರಿಕೆ?

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಗ್ರಾಮಾಂತರ ಆರೋಪಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿದ್ದ ಸುಮಾರು 2000ಕ್ಕೂ ಹೆಚ್ಚು ಪ್ರಚೋದಿತ ಪುಸ್ತಕಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಈ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *