ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ; ಕಾಫಿನಾಡಿನಲ್ಲಿ ರಸ್ತೆಗಿಳಿಯಲೂ ಭಯಪಡುತ್ತಿರುವ ಜನರು!

ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ; ಕಾಫಿನಾಡಿನಲ್ಲಿ ರಸ್ತೆಗಿಳಿಯಲೂ ಭಯಪಡುತ್ತಿರುವ ಜನರು!


ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ

ಚಿಕ್ಕಮಗಳೂರು, ಜನವರಿ 30: ಜಿಲ್ಲೆಯ ಬೀದಿ ನಾಯಿಗಳ ಕಾಟ (ನಾಯಿ ದಾಳಿ) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಸಾರ್ವಜನಿಕರಲ್ಲಿ ಭಾರೀ ಆತಂಕ ಸೃಷ್ಟಿ. ಕೇವಲ ಒಂದೇ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಸಾವಿರಕ್ಕೂ ಹೆಚ್ಚು ಜನರು ಬೀದಿ ನಾಯಿಗಳ ದಾಳಿಗೆ ಒಳಗಾಗಿರುವುದು ಬೆಳಕಿಗೆ ಬಂದಿದ್ದು, ಸ್ಥಳೀಯರು ರಸ್ತೆಯಲ್ಲಿ ಹೆದರುವ ಪರಿಸ್ಥಿತಿ ಎದುರಾಗಿದೆ. ನಾಯಿ ದಾಳಿಗೆ ಒಳಗಾದ ಎಲ್ಲಾ ಗಾಯಾಳುಗಳು ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಜಿಲ್ಲೆಯಲ್ಲಿ ಜನವರಿ 1 ರಿಂದ 29 ರವರೆಗೆ 1011 ನಾಯಿ ಕಡಿತ ಪ್ರಕರಣಗಳು ಕಂಡುಬಂದಿದ್ದು, ಮಕ್ಕಳು, ಮಹಿಳೆಯರು ಸೇರಿ ವೃದ್ಧರೂ ನಾಯಿ ಕಡಿತಕ್ಕೆ ಒಳಗಾಗಿರುವುದು ಕಂಡುಬಂದಿದೆ. ಸುಮಾರು 6 ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳು ಇರುವುದಾಗಿ ಅಂದಾಜಿಸ, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ. ತಾಲೂಕುವಾರು ನೋಡಿದರೆ, ಚಿಕ್ಕಮಗಳೂರು , ಕಡೂರು ಸೇರಿ ಏಳು ಕಡೆ ಹೆಚ್ಚಿನ ದಾಳಿಗಳು ನಡೆದಿವೆ.

ಎಲ್ಲೆಲ್ಲಿ ಎಷ್ಟೆಷ್ಟು ಪ್ರಕರಣಗಳು?

  • ಚಿಕ್ಕಮಗಳೂರು:112
  • ಕಡೂರು:183
  • ತರೀಕೆರೆ :179
  • ಮೂಡಿಗೆರೆ :194
  • ಕೊಪ್ಪ:218
  • ಎನ್.ಆರ್.ಪುರ:48
  • ಶೃಂಗೇರಿ:78

ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಆಕ್ರೋಶ

ಬೀದಿ ನಾಯಿಗಳ ನಿಯಂತ್ರಣಕ್ಕೆ ಸ್ಥಳೀಯ ಆಡಳಿತ ಹಾಗೂ ನಗರಸಭೆ ಸೂಕ್ತ ಕ್ರಮ ಕೈಗೊಂಡಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷವಾಗಿ ಶಾಲೆಗೆ ಹೋಗುವ ಮಕ್ಕಳು ಹಾಗೂ ಬೆಳಗಿನ ಜಾವ ಕೆಲಸಕ್ಕೆ ತೆರಳುವ ನಾಗರಿಕರು ಭಯಭೀತರಾಗಿದ್ದಾರೆ. ಬೀದಿ ನಾಯಿಗಳ ಸಂತಾನ ನಿಯಂತ್ರಣ, ಲಸಿಕೆ ಮತ್ತು ಪುನರ್ವಸತಿ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಸಾರ್ವಜನಿಕರು ಆಡಳಿತಕ್ಕೆ ಒತ್ತಾಯಿಸಿದರು, ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆಯಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *