Headlines

ಆಕರ್ಷಣೆ, ಪ್ರೀತಿ ಹೆಸರಲ್ಲಿ ಕಾಮದ ಅಮಲು: ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ

ಆಕರ್ಷಣೆ, ಪ್ರೀತಿ ಹೆಸರಲ್ಲಿ ಕಾಮದ ಅಮಲು: ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ


ಬೆಂಗಳೂರು, ನವೆಂಬರ್ 03: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ (ಕರ್ನಾಟಕ) ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಿಳವಳಿಕೆ ತಾಯ್ತನದ ವಯಸ್ಸಿಗೂ ಮೊದಲೇ ಬಾಳ ಗರ್ಭಿಣಿಯರ (ಹದಿಹರೆಯದ ಗರ್ಭಧಾರಣೆ) ಸಂಖೆಯಲ್ಲಿ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ 3,37,000 ಹೆಚ್ಚು ಟೀನೇಜ್ ಪ್ರೆಗ್ನೆನ್ಸಿ ಇರುವ ಬಗ್ಗೆ ಆತಂಕಕಾರಿ ಸುದ್ದಿ ಬಯಲಾಗಿದೆ.

10 ತಿಂಗಳಲ್ಲೇ 10 ಸಾವಿರ ಗಡಿದಾಟಿದ ಟೀನೇಜ್ ಪ್ರೆಗ್ನೆನ್ಸಿ!

ಕೆಲವು ಪೋಷಕರಿಗೆ ತಮ್ಮ ಮನೆಯ ಹೆಣ್ಣು ಮಕ್ಕಳಿಗೆ ಆದಷ್ಟು ಬೇಗ ಮದುವೆ ಮಾಡಿ ಜವಾಬ್ದಾರಿಯಿಂದ ಮುಕ್ತವಾಗಬೇಕು ಅನ್ನೋ ಭಾವನೆ ಇರುತ್ತೆ. ಇನ್ನು ಕೆಲವರಿಗೆ ಶಿಕ್ಷಣದ ಕೊರತೆ, ಮೂಢನಂಬಿಕೆಗಳಿಂದಲೂ ಕೆಲವು ಬಾಲ್ಯ ವಿವಾಹಕ್ಕೆ ಮುಂದಾಗಿದ್ದಾರೆ. ಈ ಕೆಲವು ದೌರ್ಜನ್ಯ ಮತ್ತು ಪ್ರೇಮ ಪ್ರಕರಣಗಳ ಕಾರಣದಿಂದ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆಯಾಗುತ್ತಿದೆ, ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ 18 ವರ್ಷ ತುಂಬಿದ ನಂತರ ಗರ್ಭಿಣಿಯರಾಗುತ್ತಿದ್ದಾರೆ, ಬಾಲಕಿಯರು ಹಲವು ದೈಹಿಕ, ಮಾನಸಿಕ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಎಲ್ಲಾ ಇಲಾಖೆಗಳಿಗೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯ ಖಾಸಗಿ ಅಂಗಕ್ಕೆ ಪೊಲೀಸರಿಂದ ಹಲ್ಲೆ: ಟಾಯ್ಲೆಟ್ಗೂ ಹೋಗಲಾಗದೆ ನರಕಯಾತನೆ

ಕಳೆದ 10 ತಿಂಗಳಲ್ಲೇ 10 ಸಾವಿರ ಗಡಿದಾಟಿದೆ ಹದಿಹರೆಯದ ಗರ್ಭಧಾರಣೆ. ರಾಜಧಾನಿಯಲ್ಲಿಯೂ ವರ್ಷದಿಂದ ವರ್ಷಕ್ಕೆ ಟೀನೇಜ್ ಪ್ರೆಗ್ನೆನ್ಸಿ ಹೆಚ್ಚಾಗುತ್ತಿದೆ. ಬೆಂಗಳೂರು ಅರ್ಬನ್‌ನಲ್ಲಿ ಕಳೆದ ಮೂರು ವರ್ಷಕ್ಕೆ 9000 ಹೆಚ್ಚು ಹದಿಹರೆಯದ ಪ್ರೆಗ್ನೆನ್ಸಿ ದಾಖಲಾಗಿದೆ.

ಟೀನೇಜ್ ಪ್ರೆಗ್ನೆನ್ಸಿಗೆ ಬಾಲ್ಯ ವಿವಾಹ, ಹದಿಹರೆಯದ ಆಕರ್ಷಣೆ ಶೋಷಣೆ ಪ್ರಮುಖ ಚಿತ್ರ. ಆಟ, ಪಾಠಗಳಲ್ಲಿ ತೊಡಗಿ ಭವಿಷ್ಯ ರೂಪಿಸುವ ಹೆಜ್ಜೆ ಹಾಕಬೇಕಾದ ಹದಿಹರೆಯದ ಅಪ್ರಾಪ್ತೆಯರು ತಾಯ್ತನದ ಭಾರ ಹೊರುತ್ತಿರುವ ಪ್ರಕರಣಗಳು ಮಿತಿ ಮೀರುತ್ತಿವೆ. ಕಳೆದ 10 ತಿಂಗಳಿನಲ್ಲಿ ಕರ್ನಾಟಕದಲ್ಲಿ ಇಂತಹ ಪ್ರಕರಣಗಳು 10 ಸಾವಿರ ಗಡಿ ದಾಟಿರುವುದು ಅಚ್ಚರಿ ಮೂಡಿಸಿದೆ.

10 ನೇ ತಿಂಗಳಿನಲ್ಲಿ 10,091ಕ್ಕೂ ಹೆಚ್ಚಿನ ಮಕ್ಕಳು ಹೆಣ್ಣು ಗರ್ಭಧಾರಣೆ

ರಾಜ್ಯದಲ್ಲಿ14 ರಿಂದ 19 ವಯೋಮಾನದ 10,091ಕ್ಕೂ ಹೆಚ್ಚಿನ ಹೆಣ್ಣು ಮಕ್ಕಳು ಅರಿವಿದ್ದೋ, ಅರಿವಿಲ್ಲದೆ ಕಳೆದ 10 ತಿಂಗಳಿನಲ್ಲಿ ಗರ್ಭಾವಸ್ಥೆಯಲ್ಲಿ ಜನಿಸುವಂತೆ ಹುಬ್ಬೇರಿಸುವಂತೆ ಮಾಡಿದೆ. ಈ ಮೇಲಿನ ಶೇ.60ರಷ್ಟು ಹೆಣ್ಣು ಮಕ್ಕಳ ಬಾಲ್ಯ ವಿವಾಹ, ಹದಿಹರೆಯದ ಆಕರ್ಷಣೆ, ಪ್ರೀತಿಯ ಹೆಸರಿನಲ್ಲಿ ನಡೆಯುವ ಶೋಷಣೆ, ಜಾಲಕ್ಕೆ ಸಿಲುಕಿ ಕಗ್ಗಿ ಹೋಗಿದ್ದಾರೆ. ಶಿಕ್ಷಣದ ಕೊರತೆ ಹಾಗೂ ಹದಿಹರೆಯದ ಹೆಣ್ಣುಮಕ್ಕಳಿಗೆ ಆರೋಗ್ಯದ ಬಗ್ಗೆ ಸೂಕ್ತ ತಿಳುವಳಿಕೆ ಇಲ್ಲದಿರುವುದೇ ಇದಕ್ಕೆ ಪ್ರಮುಖ ಕಾರಣ. ಹೀಗಾಗಿ ಶಿಕ್ಷಣ ಇಲಾಖೆಯು ಮುಂದಿನ ವರ್ಷದಿಂದ ನೈತಿಕ ಶಿಕ್ಷಣದ ಅಡಿಯಲ್ಲಿ ಶಿಕ್ಷಣದ ಅರಿವು ಮೂಡಿಸಲು ಮುಂದಾಗಿದೆ. ಈ ನವೆಂಬರ್ 14 ರಂದು ಕೆಲವು ಕಾರ್ಯಕ್ರಮಗಳ ಬಗ್ಗೆ ಸಿಎಂ ಘೋಷಿಸಲಿದ್ದಾರೆ ಎಂದು ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ರಾಜಧಾನಿಯಲ್ಲಿಯೂ ವರ್ಷದಿಂದ ವರ್ಷಕ್ಕೆ ಟೀನೇಜ್ ಪ್ರೆಗ್ನೆನ್ಸಿ ಏರಿಕೆಯಾಗುತ್ತಿದೆ. ಕಳೆದ ಮೂರು ಬೆಂಗಳೂರಿನಲ್ಲಿ ಅರ್ಬನ್‌ನಲ್ಲಿ 8900 ಪ್ರಕರಣಗಳು ಕಂಡುಬಂದಿವೆ. ಬಾಲ ತಾಯಂದಿರ ಬಗ್ಗೆ ಆರೋಗ್ಯ ಇಲಾಖೆಗೆ ಅಂಕಿ-ಸಂಖ್ಯೆಗಳು ಸದ್ಯ ಬೆಚ್ಚಿಬೀಳುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಈ ಬಗ್ಗೆ ನಾನಾ ಯೋಜನೆ ರೂಪಿಸಲು ಮುಂದಾಗಿದೆ.

ಅಂಕಿ-ಅಂಶಗಳು ಹೀಗಿವೆ

ಬೆಂಗಳೂರು- 1,113, ಉಡುಪಿ- 26, ದಕ್ಷಿಣಿ ಕನ್ನಡ- 69, ಉತ್ತರ ಕನ್ನಡ- 86, ಬೆಳಗಾವಿ- 963, ಧಾರವಾಡ- 216, ದಾವಣಗೆರೆ- 240, ಬಾಗಲಕೋಟೆ- 393, ವಿಜಯಪುರ- 714, ಬಳ್ಳಾರಿ- ರಾಯಚೂರು- 562, ತುಮಕೂರು- 690, ಚಿತ್ರದುರ್ಗ- 401, ಮೈಸೂರು- 531, ಮೈಸೂರು ಕಲಬುರಗಿ- 415, ಶಿವಮೊಗ್ಗ- 220, ವಿಜಯಪುರ- 714, ಚಿಕ್ಕಬಳ್ಳಾಪುರ- 259, ಚಿಕ್ಕಮಗಳೂರು- 169, ಕೋಲಾರ- 296.

ಇದನ್ನೂ ಓದಿ: ಪೊಲೀಸ್ ಟಾರ್ಚರ್ ನಿಂದ ಆತ್ಮಹತ್ಯೆಗೆ ಯತ್ನಿಸಿದ ಮಗ: ಠಾಣೆಗೆ ನುಗ್ಗಿ ಪೊಲೀಸರ ಚಳಿಬಿಡಿಸಿದ ತಾಯಿ

ಇನ್ನು ಬಾಲ ಗರ್ಭಿಣಿಯಾಗುವುದು ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ. ಮಗು ಜನನದ ಬಳಿಕ ಬಾಲ ಬಾಣಂತಿಯರು ರಕ್ತ ಹೀನತೆ, ಅಧಿಕ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಭೀತಿ ಇದ್ದು, ಸರ್ಕಾರ ಈ ಬಗ್ಗೆ ತ್ವರಿತವಾಗಿ ಕ್ರಮಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *