ಬೆಂಗಳೂರು, ಫೆಬ್ರವರಿ 12: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಧಿಕಾರಿಗಳ ಮೈದಾನ ಪರಿಶೀಲನಾ ವರದಿ ಸಲ್ಲಿಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಸಹಮತ ನೀಡುವ ಸಾಧ್ಯತೆಯಿದೆ. ಹಿಂದಿನ ದುರಂತದ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧಿಕಾರಿಗಳು ನ್ಯಾಯಮೂರ್ತಿ ಕುನ್ನ ಅವರ ವರದಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಪಾಲಿಸುವ ಭರವಸೆ ಇದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.