ಜೂನ್ 4 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಅದೊಂದು ದುರ್ಘಟನೆಯ ಬಳಿಕ ಇನ್ನು ಮುಂದೆ ಬೆಂಗಳೂರಿನಲ್ಲಿ ಯಾವ ಕ್ರಿಕೆಟ್ ಪಂದ್ಯವೂ ನಡೆಯುವುದಿಲ್ಲ ಎಂದು ಬೇಸರದಲ್ಲಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಕೊನೆಗೂ ಶುಭ ಸುದ್ದಿಯೊಂದು ಸಿಕ್ಕಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕೆಎಸ್‌ಎಸ್‌ಎ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ರಾಜ್ಯ ಕ್ರಿಕೆಟ್‌ಗೆ ಮರುಜನ್ಮ ಸಿಕ್ಕಿದ್ದು, ಚಿನ್ನಸ್ವಾಮಿಯಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಚಟುವಟಿಕೆ ಗರಿಗೆದರಿದೆ. ಇದೇ 202 ರ ಐಪಿಎಲ್ ಆವೃತ್ತಿಯ ಉದ್ಘಾಟನಾ ಪಂದ್ಯ ಚಿನ್ನಸ್ವಾಮಿಯಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿರುವ ವೆಂಕಟೇಶ್, ಬಿಸಿಸಿಐ ಕಾರ್ಯದರ್ಶಿಯನ್ನು ಭೇಟಿಯಾಗಿ, ಅವರು 2026 ರ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸಲು ಆಸಕ್ತಿ ತೋರಿಸಿದ್ದಾರೆ. ಐಪಿಎಲ್‌ನಲ್ಲಿ ಅಂತರರಾಷ್ಟ್ರೀಯ ಪಂದ್ಯಗಳು ಕೂಡ ಇನ್ನು ಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಆದಾಗ್ಯೂ ನಾವು ರಾಜ್ಯ ಸರ್ಕಾರದ ಬಳಿ ಈ ಬಗ್ಗೆ ಮಾತನಾಡಬೇಕಾಗಿದೆ. ಅವರ ಜೊತೆ ಸಭೆ ನಡೆಸಿದ ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇವೆ.