ಸಂಭ್ರಮಾಚರಣೆ ವೇಳೆ ನಡೆದಿದ್ದ ಕಾಲ್ತುಳಿತ
ಬೆಂಗಳೂರು, ನವೆಂಬರ್ 19: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಜನರ ಸಾವಿನ ಪ್ರಕರಣದ ಸಂಬಂಧ ತನಿಖೆ ಮುಗಿಸಿ ಚಾರ್ಜ್ ಶೀಟ್ ಸಲ್ಲಿಕೆಗೆ ನೇಮಕಾತಿ ಅಧಿಕಾರಿಗಳ ತಯಾರಿ. 2,20ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ರೆಡಿ, ಹನ್ನೊಂದು ಜನರ ಸಾವಿಗೆ ನೇರ ಹೊಣೆ RCB. ತನಿಖೆ RCB, DNA, KSCA ವಿರುದ್ಧ ಹಲವು ಸಾಕ್ಷ್ಯಗಳು ಲಭ್ಯವಿದ್ದರೆ.
ಚಾರ್ಜ್ ಶೀಟ್ ಸಲ್ಲಿಕೆಗೆ ಹಸಿರು ಸಿಗ್ನಲ್ ಹಿನ್ನೆಲೆ ತನಿಖೆ ಮುಗಿಸಿ ಚಾರ್ಜ್ ಶೀಟ್ ಸಿದ್ಧಪಡಿಸಲಾಗಿದೆ. ನೂರಾರು ಪ್ರತ್ಯಕ್ಷ ಸಾಕ್ಷಿ, ಸಿಸಿಟಿವಿ, ಗಾಯಾಳುಗಳ ಹೇಳಿಕೆ ದಾಖಲಾಗಿದೆ, RCB ಜೊತೆ KSCA, DNA ಘಟನೆಗೆ ನೇರ ಕಾರಣ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಚಾರ್ಜ್ ಶೀಟ್‌ನಲ್ಲಿ ಮೂರು ಸಂಸ್ಥೆಗಳನ್ನು ಹೊಂದಿರುವುದು ನೇರ ಹೊಣೆಯಾಗಿದೆ. ಸರಿಯಾದ ಯೋಜನೆ ಇಲ್ಲದೆಯೇ ಕಾರ್ಯಕ್ರಮ ಆಯೋಜನೆ, ಕಾರ್ಯಕ್ರಮ ಆಯೋಜನೆಗೂ ಮುನ್ನ ಸಭೆ ಸರಿಯಾಗಿ ಮಾಡಿರುವುದು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿರುವುದು ತನಿಖೆ ವೇಳೆ ಗೊತ್ತಾಗಿದೆ.
ಇದನ್ನೂ ಓದಿ: ಇದೇ ರೀತಿಯ ಫ್ರಾಂಚೈಸಿ… ಸಾಮಾಜಿಕ ಬದ್ಧತೆಯನ್ನೇ ಮರೆತ RCB
ಟಿಕೆಟ್ ಬಗ್ಗೆ ಆರ್ಸಿಬಿ ಗೊಂದಲ ಹುಟ್ಟಿಸಿದ್ದೇ, ಘಟನೆಗೆ ಮೊದಲ ಕಾರಣ. ಡಿಎನ್‌ಎ ಕಡೆಯಿಂದ ಯಾವುದೇ ಸೆಕ್ಯುರಿಟಿ ಪ್ಲಾನ್ ಇರಲಿಲ್ಲ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಬಳಕೆಯೂ ವಿಫಲವಾಗಿದೆ. ಪೊಲೀಸರು ಜೊತೆ ಸರಿಯಾದ ಮಾತುಕತೆ ನಡೆಸದೆ ಕಾರ್ಯಕ್ರಮ ಆಯೋಜನೆ ಮಾಡಿರೋದು ತನಿಖೆ ವೇಳೆ ಗೊತ್ತಾಗಿದೆ. ಎಲ್ಲಾ ಗೇಟ್ ಬಳಿಯ ಸಿಸಿಟಿವಿ ಪರಿಶೀಲನೆ, ವಿಡಿಯೋದಲ್ಲಿದ್ದವರ ಹೇಳಿಕೆ, ಗೇಟ್‌ನ ಸೆಕ್ಯುರಿಟಿ, ಡ್ಯೂಟಿಗೆ ಹಾಜರಾಗಿದ್ದ ಪೊಲೀಸರ ಹೇಳಿಕೆಗಳನ್ನು ತನಿಖಾ ತಂಡ ದಾಖಲಿಸಿದೆ. ಗಾಯಾಳು ಹೇಳಿಕೆ, ಗಾಯಾಳುಗಳನ್ನ ಸಾಗಿಸಿದವರ ಹೇಳಿಕೆ ಸೇರಿ ನೂರಾರು ಪ್ರತ್ಯಕ್ಷ ಸಾಕ್ಷಿಗಳ ಮಾಹಿತಿ ಚಾರ್ಜ್ ಶೀಟ್ ನಲ್ಲಿದೆ.
RCB ತಂಡ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆದ ಹಿನ್ನಲೆ ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಿತು. ಈ ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದ ಪರಿಣಾಮ ನೂಕುನುಗ್ಗಲು ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 11 ಮಂದಿ ಆರ್ ಸಿಬಿ ಅಭಿಮಾನಿಗಳು, ಆಸ್ಪತ್ರೆ ಅಸ್ವಸ್ಥಗೊಂಡಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.