ಚಿತ್ರದುರ್ಗ, ಜನವರಿ 06: ಮರಕ್ಕೆ ಬೊಳ್ಳೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್ ಇಳಿಸಿ ವಾಹನ ಬರುವಾಗ ಅಪಘಾತ ಸಂಭವಿಸಿದೆ. ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು. ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದರೆ, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.