ಚಿತ್ರದುರ್ಗ ಬಸ್ ದುರಂತ: ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ

ಚಿತ್ರದುರ್ಗ ಬಸ್ ದುರಂತ: ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ


ಚಿತ್ರದುರ್ಗ, ಡಿ.26: ಗೊರ್ಲತ್ತು ಬಳಿ ಇತ್ತೀಚೆಗೆ ನಡೆದ ಭೀಕರ ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಅವರ ಜೀವಕ್ಕೆ ಯಾವುದೇ ಗ್ಯಾರಂಟಿ ನೀಡಲು ಸಾಧ್ಯವಿಲ್ಲ ಎಂದು ವೈದ್ಯರು ಕುಟುಂಬಕ್ಕೆ ತಿಳಿಸಿದ್ದರು. ರಫೀಕ್ ಅವರ ಪತ್ನಿ ನೀಡಿರುವ ಮಾಹಿತಿ ಪ್ರಕಾರ, ಅಪಘಾತದಲ್ಲಿ ಅವರ ಹೊಟ್ಟೆಯ ಭಾಗಕ್ಕೆ ತೀವ್ರ ಪೆಟ್ಟುಬಿದ್ದಿತ್ತು. ಹೊಟ್ಟೆಯ ಒಳಗಿರುವ ಕೆಲವು ಭಾಗಗಳಿಗೆ ಹಾನಿಯಾಗಿದೆ. ಆಪರೇಷನ್‌ಗೆ ಮುನ್ನವೇ ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದರೂ, ಇದಕ್ಕೆ ನಾವು ವೈದ್ಯರಿಗೆ ಅನುಮತಿ ನೀಡಿದ್ದೇವೆ, ಆಪರೇಷನ್ ನಂತರ ವಾರ್ಡ್‌ಗೆ ಸ್ಥಳಾಂತರಿಸಿದರು, ಮರುದಿನ ಬೆಳಗ್ಗೆ 6:30 ರ ಸುಮಾರಿಗೆ ವೈದ್ಯರ ರಫೀಕ್ ಕಂಡುಬಂದಿದೆ. ಇದೀಗ ಮೊಹಮ್ಮದ್ ರಫೀಕ್ ಅವರ ನಿಧನದಿಂದ ಅವರ ಕುಟುಂಬ ಕಂಗಾಲಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *