Headlines

ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ ಎಫ್​ಐಆರ್

ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ ಎಫ್​ಐಆರ್


ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ ಎಫ್‌ಐಆರ್

ಚಿತ್ರದುರ್ಗ, ಮಾರ್ಚ್ 14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಲ್ಲಿ ಚಿತ್ರದುರ್ಗ (ಚಿತ್ರದುರ್ಗ) ನಗರಾಭಿವೃದ್ಧಿ ಕೋಶದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿ ಸೇರಿ ಒಟ್ಟು ಆರು ಜನರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

15 ಲಕ್ಷ ರೂಪಾಯಿ ಮೌಲ್ಯದ ನಕಲಿ ಬಿಲ್ ಸಲ್ಲಿಕೆ!

ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿಟಿ ಲೆವಲ್ ಟೆಕ್ನಿಕಲ್ ಸೆಲ್ (CLTC) ಸಿಬ್ಬಂದಿಗಳ ವೇತನದ ಹೆಸರಿನಲ್ಲಿ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ನಕಲಿ ಬಿಲ್ ಸಲ್ಲಿಸಿರುವುದು ತಿಳಿದು ಬಂದಿದೆ. ಖಜಾನೆ ಇಲಾಖೆಯು ಡಿಜಿಟಲ್ ಸಹಿ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿದ ಹಿನ್ನೆಲೆ ಈ ಅಕ್ರಮ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ನೀಡಿದ ದೂರಿನ ಆಧಾರದ ಮೇಲೆ ಹೊರಗುತ್ತಿಯ ನೌಕರರಾದ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮೆಹಬೂಬ್ ಭಾಷಾ ಹಾಗೂ VMH ಎಂಟರ್‌ಪ್ರೈಸಸ್‌ನ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಸೈಯದ್ ಸಾದಿಕ್ ಪರಾರಿಯಾಗಿದ್ದಾನೆ. ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್ ಸಿಗ್ನೇಚರ್ ಸರ್ಟಿಫಿಕೆಟ್ (DSC) ಕೀ ಕಳವು ಮಾಡಿ ದುರುಪಯೋಗಪಡಿಸಿಕೊಂಡ ಆರೋಪವೂ ಹೊರಬಂದಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಯುತ್ತಿದ್ದು, ಯಾವುದಾದರೂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *