ಚಿತ್ರದುರ್ಗದ ಗೂಡಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ; ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ಬೀದಿಗೆಸೆದು ಸ್ಥಳೀಯರ ಆಕ್ರೋಶ

ಚಿತ್ರದುರ್ಗದ ಗೂಡಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ; ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ಬೀದಿಗೆಸೆದು ಸ್ಥಳೀಯರ ಆಕ್ರೋಶ


ಚಿತ್ರದುರ್ಗ, ನವೆಂಬರ್ 11: ಚಿತ್ರದುರ್ಗ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಒಂದು ಗೂಡಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆ, ಸ್ಥಳೀಯರು ಅಂಗಡಿಗೆ ನುಗ್ಗಿದ ಬಾಟಲಿಗಳನ್ನು ಬೀದಿಗೆಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಲು ಹಾಗೂ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವಂತೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *