ಬೆಂಗಳೂರು, ಜನವರಿ 31: ಸಿಜೆ ರಾಯ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಎಸ್‌ಸಿಪಿ ಸುಧೀರ್, ಸಿಸಿಆರ್‌ಬಿ ಎಸ್‌ಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್ ಪೆಕ್ಟರ್ ರವಿ ಕೂಡ ಈ ಎಸ್‌ಐಟಿ ತಂಡದಲ್ಲಿದ್ದಾರೆ. ಆತ್ಮಹತ್ಯೆಗೆ ಐಟಿ ರೈಡ್ ಒತ್ತಡವೇ ಕಾರಣ ಎಂಬ ಆರೋಪ ಕೇಳಿಬಂದಿದೆ, ಎಸ್ಐಟಿ ಈ ಕುರಿತು ಸಮಗ್ರ ತನಿಖೆ ನಡೆಸಲಿದೆ. ಅವರ ಮೊಬೈಲ್ ಫೋನ್ ಚೆಕ್, ಹಣಕಾಸು ವ್ಯವಹಾರಗಳು ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.