ಬೆಂಗಳೂರು, (ಫೆಬ್ರವರಿ 01): ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯರ ಆತ್ಮಹತ್ಯೆ (ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ) ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ (ಮೋಹನದಾಸ್ ಪೈ)ವ್ಯಕ್ತಪಡಿಸಿದ್ದು, ರಾಯರ ಸಾವಿನ ಬಗ್ಗೆ ಮುಕ್ತ ಪಾರದರ್ಶಕವಾಗಿ ತನಿಖೆಗೆ ಮನವಿ ಮಾಡಲಾಗಿದೆ. ತೆರಿಗೆ ಅಧಿಕಾರಿಗಳು ದಾಳಿ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟ್ವೀಟ್ ಮೂಲಕ ವಿಶೇಷ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಉದ್ಯಮಿ ಮೋಹನ್ ದಾಸ್ ಪೈ, ತೆರಿಗೆ ಭಯೋತ್ಪಾದನೆಯಿಂದ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥರನ್ನ ಕಳೆದುಕೊಂಡಿದ್ದೇವೆ. ತೆರಿಗೆ ಅಧಿಕಾರಿಗಳಿಂದ ಹಲವಾರು ಜನರು ಭಯಭೀತರಾಗಿದ್ದಾರೆ. ನಾಗರಿಕ ಹಕ್ಕುಗಳ ಮೇಲೆ ದಾಳಿಯಾಗುತ್ತಿದೆ. ದಯವಿಟ್ಟು ತೆರಿಗೆ ಪಾವತಿದಾರರನ್ನು ಈ ರೀತಿಯ ದಾಳಿಗಳು ಮತ್ತು ನಾಗರಿಕ ಹಕ್ಕುಗಳ ಮೇಲಿನ ದಾಳಿಯಿಂದ ರಕ್ಷಿಸುವಂತೆ ವಿನಂತಿಸಲಾಗಿದೆ.
ಸಾಮಾನ್ಯವಾಗಿ ದಾಳಿ ಪ್ರಕ್ರಿಯೆ ತುಂಬಾ ಕ್ರೂರವಾಗಿದೆ. ನಮ್ಮ ವಿತ್ತ ಸಚಿವರು ಅಧಿಕಾರಿಗಳಿಗೆ ಹೆಚ್ಚು ಅಧಿಕಾರ ನೀಡ್ತಿದ್ದಾರೆ. ಆದರೆ ಇದರಿಂದ ನಾಗರಿಕರ ರಕ್ಷಣೆ ಎಲ್ಲಿದೆ? ತಪ್ಪು ದಾಳಿಗೆ ಶಿಕ್ಷೆಯಾಗಿದೆಯೇ? ಇಲ್ಲ. ಕಳೆದ 3 ವರ್ಷಗಳಲ್ಲಿ ನೇರ ತೆರಿಗೆಗಳ ಮೂಲಕ 72 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆಯೇ? ಇಂತಹ ದಾಳಿಗಳ ಮೂಲಕ ಎಷ್ಟು ಸಂಗ್ರಹಿಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.