‘ಬಿಗ್ ಬಾಸ್ ಕನ್ನಡ ಸೀಸನ್ 12’ (ಬಿಬಿಕೆ 12) ಆಟದಲ್ಲಿ ಈಗ 8 ಜನರ ನಡುವೆ ಪೈಪೋಟಿ ಮುಂದುವರಿದಿದೆ. ಧ್ರುವಂತ್ ಮತ್ತು ಮ್ಯೂಟೆಂಟ್ ರಘು (ಮ್ಯುಟೆಂಟ್ ರಘು) ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅವರಿಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇಬ್ಬರೂ ಕೂಡ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಕಿತ್ತಾಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಜಗಳ ನಡೆದಿದೆ. ಕಳೆದ ವಾರ ಸ್ಪಂದನಾ ಸೋಮಣ್ಣ ಅವರು ಎಲಿಮಿನೇಟ್ ಆದರು. ಮುಂದಿನ ವಾರ ಬಿಗ್ ಬಾಸ್ ಮನೆಯಿಂದ ಯಾರಿಗೆ ಗೇಟ್ ಪಾಸ್ ಇದೆ ಎಂದು ತಿಳಿಯುವ ಕೌತುಕ ಇರಬಹುದು. ಜನವರಿ 5 ರ ಬಿಗ್ ಬಾಸ್ ಸಂಚಿಕೆಯ ಕಾರ್ಯಕ್ರಮವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.