ಬೆಂಗಳೂರು, ನವೆಂಬರ್ 6: ಸಿಗ್ನಲ್ ಜಂಪ್ ಮಾಡಿ ಬಂದ ಬೈಕ್ ಸವಾರ ಬಿಎಂಟಿಸಿ ಬಸ್ ಅಡಿ ಬೀಳುವುದರಲ್ಲಿದ್ದು, ಸ್ವಲ್ಪದರಲ್ಲೇ ಪ್ರಾಣಪಾಯದಿಂದ ಪಾರಾದ ಘಟನೆ ಬೆಂಗಳೂರಿನ ದೇವೇಗೌಡ ಪೆಟ್ರೋಲ್ ಬಂಕ್ ಜಂಕ್ಷನ್ ನಲ್ಲಿ ನಡೆದಿದೆ. ಸಿಗ್ನಲ್ ಜಂಪ್ ಮಾಡಿ ಬಂದ ಬೈಕ್ ಸವಾರ ಎದುರು ನಿಂತಿದ್ದ ಕಾರಿಗೆ ಗುದ್ದಿ ಪರಾರಿಯಾಗಿದ್ದಾನೆ. ಬನಶಂಕರಿ ಕಡೆಯಿಂದ ಬಂದ ಬೈಕ್ ಸವಾರ ಕಾಮಾಕ್ಯ ಕಡೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ ಅಡಿ ಬೀಳುವುದರಿಂದ ಜಸ್ಟ್ ಮಿಸ್ ಆಗಿದ್ದಾನೆ. ನವೆಂಬರ್ 4 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದೀಗ ಸಾಮಾಜಿಕ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ