Headlines

ಅವಧಿ ಮುನ್ನವೇ ಫೋಟೋ ಶೂಟ್ ಬಗ್ಗೆ ಭಾರೀ ಚರ್ಚೆ: ಸಿಎಂ ಬದಲಾವಣೆಯೋ? ಸ್ಪೀಕರ್ ಚೇಂಜ್? ಸಂಪುಟ ಪುನರ್ ರಚನೆಯೋ?

ಅವಧಿ ಮುನ್ನವೇ ಫೋಟೋ ಶೂಟ್ ಬಗ್ಗೆ ಭಾರೀ ಚರ್ಚೆ: ಸಿಎಂ ಬದಲಾವಣೆಯೋ? ಸ್ಪೀಕರ್ ಚೇಂಜ್? ಸಂಪುಟ ಪುನರ್ ರಚನೆಯೋ?


ಅವಧಿ ಮುನ್ನವೇ ಫೋಟೋ ಶೂಟ್ ಬಗ್ಗೆ ಭಾರೀ ಚರ್ಚೆ: ಸಿಎಂ ಬದಲಾವಣೆಯೋ? ಸ್ಪೀಕರ್ಚೇಂಜ್? ಸಂಪುಟ ಪುನರ್ ರಚನೆಯೋ?

ಬೆಂಗಳೂರು, (ಮಾರ್ಚ್ 25): ಸರ್ಕಾರದ (ಕರ್ನಾಟಕ ಸರ್ಕಾರ) ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ (ಶಾಸಕರ ಗುಂಪು ಫೋಟೋಶೂಟ್) ನಡೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಾಕಂದ್ರೆ, ಸಾಮಾನ್ಯವಾಗಿ ವಿಧಾನಸಭೆ ಅವಧಿ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ ಸ್ಪೀಕರ್ ಸಮ್ಮುಖದಲ್ಲಿ ಶಾಸಕರ ಗುಂಪು ಫೋಟೋ ತೆಗೆದುಕೊಳ್ಳುವುದು ಸಂಪ್ರದಾಯವಾಗಿದೆ. ಆದರೆ, ಅವಧಿಗೂ ಮುನ್ನವೇ ಸ್ಫೀಕರ್ ಯುಟಿ ಖಾದರ್, (ಯು.ಟಿ. ಖಾದರ್)ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಶಾಸಕರ ಫೋಟೋ ಶೂಟ್ ಮಾಡಿರುವುದು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಸಿಎಂ ಬದಲಾವಣೆ, ಸ್ಪೀಕರ್ ಬದಲಾವಣೆ ಅಥವಾ ಸಂಪುಟ ಪುನರ್ರಚನೆಯ ಮುನ್ಸೂಚನೆಯೇ ಎಂಬ ಗೊಂದಲ ಮತ್ತು ಅನುಮಾನಗಳನ್ನು ಶಾಸಕರಲ್ಲಿ ಹುಟ್ಟುಹಾಕಿದೆ. ಹೌದು.. ಶೀಘ್ರದಲ್ಲೇ ಸಂಪುಟಕ್ಕೆ ಸರ್ಜರಿಯಾಗಲಿದೆ, ಸ್ಪೀಕರ್ ಖಾದರ್ ಅವರು ಸಹ ಸಂಪುಟ ಸೇರುವ ಸಾಧ್ಯತೆಯಿದೆ ಹೀಗಾಗಿಯೇ ವಿಧಾನಸಭೆ ಮುಕ್ತಾಯಕ್ಕೂ ಮೊದಲೇ ಫೋಟೋ ಶೂಟ್ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಅವಧಿಗೂ ಮುನ್ನವೇ 16 ವಿಧಾನಸಭೆಯ ಶಾಸಕರ ಗುಂಪಿನ ಫೋಟೋ ಹಿಂದಿನ ಮರ್ಮ ಏನು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ವಿಧಾನಸೌಧದ ಪಡಸಾಲೆಗಳಲ್ಲಿ ಕೂಡ ಇದೆ ವಿಚಾರ ಚರ್ಚೆಗೆ ಗ್ರಾಸವಾಗಿದೆ, ಪರಸ್ಪರ ಶಾಸಕರು ಕಾರಣಗಳನ್ನು ಹುಡುಕುತ್ತಿದ್ದಾರೆ. ಫೋಟೋ ಶೂಟ್ ಹಿಂದೆ ಏನಾದರೂ ರಾಜಕೀಯ ಸಂದೇಶವಿದೆಯೇ ಎಂಬ ಅನುಮಾನಗಳು ಕಂಡುಬರುತ್ತಿವೆ.

ಇದನ್ನೂ ನೋಡಿ: ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!

ಫೋಟೋ ಶೂಟ್ ಬಗ್ಗೆ ಬಿಸಿಬಿಸಿ ಚರ್ಚೆ

ವಿಧಾನಸೌಧದ ಒಳಗಡೆ, ವಿಶೇಷವಾಗಿ ಪಡಸಾಲೆಗಳಲ್ಲಿ, ಈ ವಿಷಯದ ಪ್ರಮುಖ ಚರ್ಚೆ, ಶಾಸಕರು ಪರಸ್ಪರ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಧಿಕೃತವಾಗಿ ಸ್ಪಷ್ಟನೆ ಸಿಗದಿರುವುದರಿಂದ ಈ ಪ್ರಶ್ನೆಗಳು ಯಾವುದೇ ಗೊಂದಲದ ಅನುಮಾನಗಳು ಹೆಚ್ಚಾಗುತ್ತಿವೆ

ಈ ಬೆಳವಣಿಗೆಯನ್ನು ಮುಖ್ಯಮಂತ್ರಿ ಬದಲಾವಣೆಯ ಮುನ್ಸೂಚನೆ ಎಂದು ವ್ಯಾಖ್ಯಾನಿಸುತ್ತಿದ್ದಾರೆ. ಸಿಎಂ ಬದಲಾವಣೆ ಸಂಭವಿಸಿದರೆ, ಸಂಪುಟದಲ್ಲಿ ಹಾಗೂ ವಿವಿಧ ಹುದ್ದೆಗಳಲ್ಲಿ ಮಹತ್ತರ ಬದಲಾವಣೆಗಳು ಸಂಭವಿಸಬಹುದು. ಇದೇ ಕಾರಣಕ್ಕಾಗಿ ಮುಂಚಿತವಾಗಿ ನೆನಪಿಗಾಗಿ ಫೋಟೋ ಶೂಟ್ ನಡೆಸಲಾಗಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಇನ್ನೂ ಕೆಲವು ಸ್ಪೀಕರ್ ಬದಲಾವಣೆ ಅಥವಾ ಸಂಪುಟ ಪುನರ್ರಚನೆಗೆ ಮುನ್ನ ನಡೆಯುವ ಸಿದ್ಧತೆಯಾಗಿರಬಹುದೇ ಎಂಬ ಸಂಶಯ ವ್ಯಕ್ತಪಡಿಸಲಾಗುತ್ತಿದೆ. ಸಂಪುಟ ಪುನಾರಚನೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಸಹ ಗ್ರೀನ್ ಸಿಗ್ನಲ್ ಕೊಟ್ಟಿರುವ ಸಾಧ್ಯತೆಗಳಿವೆ. ಹೀಗಾಗಿ ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಸ್ಪೀಕರ್‌ಗೆ ಮುನ್ಸೂಚನೆ ಸಿಕ್ಕಿಲ್ಲ ಎಂಬ ಫೋಟೋ ಶೂಟ್ ಮಾಡಿದ್ದಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.

ಸಂಪುಟ ಪುನಾರಚನೆಗೆ ತೀವ್ರ ಒತ್ತಡ

ರಾಜ್ಯ ಸರ್ಕಾರದ ಸಂಪುಟ ಪುನರ್ರಚನೆ ಚರ್ಚೆ ನಡೆಯುತ್ತಿದೆ. ಆಕಾಂಕ್ಷಿಗಳು ಸಭೆಗಳನ್ನು ನಡೆಸಿ ಸಂಪುಟ ಪುನರ್ರಚನೆಗೆ ಒತ್ತಡ ಹೇರುತ್ತಿದ್ದಾರೆ. ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದು, ಮೊದಲ ಬಾರಿ ಶಾಸಕರಾದವರು ನಮಗೆ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ ಎಂದು ಕೇಳಿದ್ದಾರೆ. ಎರಡು ವರ್ಷ ಪೂರೈಸಿರುವ ಸಚಿವರನ್ನು ಬಿಟ್ಟು ಇನ್ನುಳಿದ ಎರಡು ವರ್ಷ ಅವಧಿಗೆ ಬೇರೆಯವರನ್ನ ಸಚಿವ ಸ್ಥಾನ ನೀಡಬೇಕೆನ್ನುವುದು ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಯ ನಡುವೆ ಸ್ಪೀಕರ್ ಯು.ಟಿ ಖಾದರ್ ಅವರು ಶಾಸಕರ ಫೋಟೋಶೂಟ್ ಲಭ್ಯ.

ವಿಪಕ್ಷದ ಶಾಸಕರಿಂದ ನಾನಾ ವ್ಯಾಖ್ಯಾನ

ವಿಪಕ್ಷದ ಕೆಲವು ಶಾಸಕರು ಫೋಟೋ ಶೂಟ್ ಬಗ್ಗೆ ನಾನಾ ವ್ಯಾಖ್ಯಾನ ನೀಡುತ್ತಿದ್ದಾರೆ. ಹೌದು..ಅವಧಿ ದಿಢೀರ್ ಆಗಿ ಸ್ಪೀಕರ್ ಫೋಟೋ ಶೂಟ್ ಮಾಡಿಸಿಕೊಂಡ ಉದ್ದೇಶ ಏನು ಎಂಬುವುದು ಕುತೂಹಲವಾಗಿದೆ. ಇದು ಸಂಪುಟ ಪುನಾರಚನೆ ಆಗಲಿದೆ ಎಂಬ ಸುಳಿವು ಇದೆ ಎಂದು ಹೇಳಲಾಗಿದೆ.ಇನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಗ್ರೂಪ್ ಫೋಟೋಗೆ 3 ಕಾರಣ ಕೊಟ್ಟ ಬಿಜೆಪಿ ಶಾಸಕ

ಕರ್ನಾ ಟಕ ವಿಧಾನಸಭೆಯ ಸಭಾಧ್ಯಕ್ಷರು ಯು. ಟಿ.ಖಾದರ್ ತಮ್ಮ ವಿಶಿಷ್ಟ ಕೆಲಸಗಳನ್ನು ಮಾಡುವುದರಲ್ಲಿ ಇವರಿಗೆ ವಿಪರೀತ ಉಮೇದು. ರಾಜ್ಯದ ಮಾಜಿ ಧೀಮಂತ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯನವರು 50 ರ ಪ್ರಸ್ತುತದಲ್ಲಿ ಕೇವಲ 1.50 ಕೋಟಿ ಹಣದಲ್ಲಿ ನಿರ್ಮಿಸಿದ ಭವ್ಯ ವಿಧಾನಸೌಧಕ್ಕೆ 84 ಲಕ್ಷ ರೂ. ವೆಚ್ಚದಲ್ಲಿ ಹೊಸ ಬಾಗಿಲನ್ನು ನಿರ್ಮಿಸಿದ ಹೆಗ್ಗಳಿಕೆ ನಮ್ಮ ಈ ಸಭಾಧ್ಯಕ್ಷರದ್ದು. ಹಳೆಯ ಬಾಗಿಲು ಹಾಳಾಗಿ ಹೋಗುತ್ತೆ? ಶಿಥಿಲವಾಗಿತ್ತೇ? ಗೆದ್ದಲು ತಿಂದಿತ್ತೇ? ಅಥವಾ ಯಾರಾದರೂ ಬಾಗಿಲು ಹಳೆದಾಗಿದೆ, ಬದಲಿಸಿ ಎಂದು ಕೇಳಿದ್ದರೇ?. ಹೊಸ ಬಾಗಿಲು ಹಾಕುವುದಕ್ಕೆ ಕಾರಣ ಯಾರಿಗೂ ಗೊತ್ತಿಲ್ಲ. ಈಗ ಮತ್ತೊಂದು ಹೊಸ ಕಾರ್ಯ ಮಾಡಲು ನಮ್ಮ ಸಭಾಧ್ಯಕ್ಷರು ಇಳಿದಿದ್ದಾರೆ. ವಿಧಾನ ಎಲ್ಲಾ ಸದಸ್ಯರ ಗುಂಪು ಫೋಟೋ ಸಭೆಯನ್ನು ಯೋಜಿಸಲಾಗಿದೆ. ಸಾಮಾನ್ಯವಾಗಿ ಶಾಸಕರ ಗ್ರೂಪ್ ಫೋಟೋ ತೆಗೆಯುವುದು ಐದು ವರ್ಷಗಳ ಅವಧಿಯ ಕೊನೆಯಲ್ಲಿ. ಅಂದರೆ 2028 ಮಾರ್ಚ್- ಏಪ್ರಿಲ್ ತಿಂಗಳು. ಹೀಗಿದ್ದಾಗ ಈ ಗುಂಪಿನ ಫೋಟೋ ಅಗತ್ಯವೇನಿತ್ತು? ಹಾಗೆ ಯೋಚಿಸಿದಾಗ ಕಾರಣಗಳು ಈ ಕೆಳಕಂಡಂತಿರಬಹುದು.

  1. ಎ) ಈ ಅಧಿವೇಶನದ ನಂತರ ಖಾದರ್ ರವರು ಸಭಾಧ್ಯಕ್ಷರ ಸ್ಥಾನದಿಂದ ಸಚಿವ ಸ್ಥಾನಕ್ಕೆ ಹೋಗುವ ಇರಾದೆ ಹೊಂದಿರಬಹುದು. ಮತ್ತು ಅದಕ್ಕೆ ಹಸಿರು ನಿಶಾನೆಯೂ ದೊರಕಿರಬಹುದು.
  2. ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬದಲಾಗುತ್ತಾರೆಯೇ? ಅವರು ಮುಖ್ಯಮಂತ್ರಿ ಆಗಿರುವಾಗ ಒಂದು ಫೋಟೋ ಇರಲಿ ಎಂದಿರಾ? ಅಥವಾ
  3. ಮಧ್ಯಂತರ ಚುನಾವಣೆ ನಡೆಯುತ್ತಿದೆಯೇ?
    ಈ ಮೇಲಿನ ಮೂರು ಕಾರಣಗಳಲ್ಲಿ ಯಾವುದು ಈ ಮಧ್ಯಂತರ ಗುಂಪಿನ ಫೋಟೋಗೆ ಕಾರಣ?

ಒಟ್ಟಿನಲ್ಲಿ ಅವಧಿಗೂ ಮುನ್ನವೇ 16ನೇ ವಿಧಾನಸಭೆ ಸದಸ್ಯರ ಗ್ರೂಫ್ ಫೋಟೋ ಶೂಟ್ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬದಲಾವಣೆಯಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *