
ಕಲಬುರಗಿ, ಏ.11 : ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲೆಯ ನಾಲವಾರ ಮಠದ ಶ್ರೀಗಳಿಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡುವ ಮೂಲಕ ವಿಶೇಷವಾಗಿ ಅಭಿನಂದಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕೋರಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಜಿಲ್ಲೆಯ ಸೂಗೂರು ಕಾರ್ಯಕ್ರಮ ಮುಗಿಸಿ ಮಠಕ್ಕೆ ಆಗಮಿಸಿದ ಸಿಎಂ ಅವರ ಮಠದ ಪೀಠಾಧಿಪತಿಗಳಾದ ಶ್ರೀೇಂದ್ರ ಸ್ವಾಮೀಜಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಶ್ರೀಗಳು ಮುಖ್ಯಮಂತ್ರಿಗಳಿಗೆ ಚಿನ್ನದ ಉಂಗುರ ತೊಡಿಸಿದರು. ಸಿದ್ದರಾಮಯ್ಯ ಅವರಿಗೆ ಇದುವರೆಗೆ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡಿಸಿರುವ ಸಾಧನೆಯನ್ನು ಗುರುತಿಸಿ ಮಠದ ವತಿಯಿಂದ ಈ ವಿಶೇಷ ಉಡುಗೊರೆಯನ್ನು ನೀಡಲಾಯಿತು. ಶ್ರೀಗಳು ಪ್ರೀತಿಯಿಂದ ನೀಡಿದ ಈ ‘ಗೋಲ್ಡನ್’ ಉಡುಗೊರೆಯನ್ನು ಮುಖ್ಯಮಂತ್ರಿಗಳು ನಗುನಗುತ್ತಲೇ ಸ್ವೀಕರಿಸಿ ಕೃತಜ್ಞತೆಯನ್ನು ಸಲ್ಲಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ