ಬೆಂಗಳೂರು (ನವೆಂಬರ್ 17): ಸದ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಸಂಬಂಧ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಟೆನ್ಷನ್ ನಲ್ಲಿದ್ದು, ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಇದರ ನಡುವೆ ಸಿದ್ದರಾಮಯ್ಯನವರ ಪತ್ನಿ ಆರೋಗ್ಯದಲ್ಲಿ ಏಳುಪೇರಾಗಿದ್ದರೆ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸಮಸ್ಯೆ ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ, ಸದ್ಯ ಅವರಿಗೆ ಐಸಿಯುನಲ್ಲಿ ವೈದ್ಯರು ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ಪಡೆಯುತ್ತಿದೆ.
ಇನ್ನು ತಾಯಿಯ ಆರೋಗ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪುತ್ರ ಯತೀಂದ್ರ, ಶ್ವಾಸಕೋಶದಲ್ಲಿ ನೀರು ತುಂಬಿದೆ. ಇದರಿಂದಾಗಿ ಸಮಸ್ಯೆ ಉಂಟಾಗಿತ್ತು. ಇದರಿಂದ ವೈದ್ಯರು ಸಾಕಷ್ಟು ಪರೀಕ್ಷೆ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಳೆಯವರೆಗೆ (ನವೆಂಬರ್ 18) ಆಸ್ಪತ್ರೆಯಲ್ಲೇ ಅಡ್ಮಿಟ್ ಇರಲು ವೈದ್ಯರು. ಸಿಎಂ ಸಹ ಆಸ್ಪತ್ರೆಗೆ ಬರಲಿದ್ದಾರೆ. ನಾನು ಇಲ್ಲೇ ಇರುತ್ತೇನೆ ಎಂದು ಮಾಹಿತಿ ನೀಡಿದರು.