ಬೆಂಗಳೂರು, (ನವೆಂಬರ್ 17): ಮುಖ್ಯಮಂತ್ರಿ ಸಿದ್ದರಾಮಯ್ಯ (ಸಿದ್ದರಾಮಯ್ಯ) ಪತ್ನಿ ಪಾರ್ವತಿ (ಪಾರ್ವತಿ) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರೆ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದಾಗಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಇಂದು (ನವೆಂಬರ್ 17) ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ, ವೈದ್ಯರ ತಂಡದಿಂದ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.