
ಬೆಂಗಳೂರು, ಮಾ.11: ಬೆಂಗಳೂರು ನಗರದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (ಎಲ್‌ಪಿಜಿ) ಸಿಲಿಂಡರ್ ಕೊರತೆಯು ಹುಬ್ಬಳ್ಳಿಯ ಹೋಟೆಲ್ ಅನ್ನು ಸಂಕಷ್ಟಕ್ಕೆ ದೂಡಿದೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯ, ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಹೆಚ್ಚು ಗ್ಯಾಸ್ ಬಳಸುವ ಪದಾರ್ಥಗಳಾದ ಪುರಿ, ದೋಸೆ ಸೇರಿದಂತೆ ಕೆಲವು ಪ್ರಮುಖ ಉಪಹಾರಗಳನ್ನು ಸ್ಥಗಿತಗೊಳಿಸಲಾಗಿದೆ. ಗ್ಯಾಸ್ ಉಳಿತಾಯ ಕೇವಲ ಸೀಮಿತ ತಿಂಡಿಗಳನ್ನು ಮಾತ್ರ ತಯಾರಿಸಲಾಗುತ್ತಿದೆ. ಹೋಟೆಲ್ ನಂಬಿ ಜೀವನ ಮಾಡುತ್ತಿರುವ ಸಾವಿರಾರು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. “ಹೋಟೆಲ್ ಬಂದ್ ಆದರೆ ನಮ್ಮ ಕುಟುಂಬದ ಗತಿ ಏನು?” ಎಂದು ಕೆಲಸಗಾರರು ಕಣ್ಣೀರು ಹಾಕುತ್ತಿದ್ದಾರೆ. ಕೆಲವು ಸಣ್ಣ ಹೋಟೆಲ್‌ಗಳು ಬಾಗಿಲು ಹಾಕಿದ್ದರೆ, ದೊಡ್ಡ ಹೋಟೆಲ್‌ಗಳು ದಾಸ್ತಾನು ಇರುವಷ್ಟು ದಿನ ಮಾತ್ರ ವ್ಯವಹಾರ ನಡೆಸಲು ಮುಂದಾಗಿವೆ. ಇನ್ನು ಬೆಂಗಳೂರಿನ ಅನೇಕ ಕಡೆ ಇದು ಹೋಟೆಲ್‌ಗಳು ಬಂದ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಾಣಿಜ್ಯ ಎಲ್‌ಪಿಜಿ (ಎಲ್‌ಪಿಜಿ) ಸಿಲಿಂಡರ್‌ಗಳ ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಈ ಸಮಸ್ಯೆಯಿಂದ ಕಂಗೆಟ್ಟಿರುವ ಹೋಟೆಲ್ ಉದ್ಯಮಿಗಳು ಟಿವಿ9 ಮೂಲಕ ತಮ್ಮ ಅಳಲನ್ನು ತೊಡಿಸಿಕೊಂಡಿದ್ದು, ಸರ್ಕಾರದ ವಿಳಂಬ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ಕಂಗೆಟ್ಟಿತ್ತು. ಸಿಲಿಂಡರ್ ಸಿಗದಿರುವುದು ಗಾಯದ ಮೇಲೆ ಬರೆ ಎಳೆ ನೀರು ಈಗ. ಹೋಟೆಲ್ ಉದ್ಯಮವನ್ನು ನಂಬಿ ರಾಜ್ಯದಲ್ಲಿ ಕೋಟ್ಯಂತರ ಜನರು ಬದುಕು ಕಟ್ಟಿಕೊಂಡಿದ್ದಾರೆ. ಗ್ಯಾಸ್ ಪೂರೈಕೆ ಸಮರ್ಪಕವಾಗದಿದ್ದರೆ ಮುಂದೆ ದಾರಿ ಕಾಣುವುದಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಈ ಗಂಭೀರ ಪರಿಸ್ಥಿತಿಯನ್ನು ಗಮನಿಸಿ, ಸಮರ್ಪಕ ಗ್ಯಾಸ್ ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಸಂಪೂರ್ಣವಾಗಿ ಕುಸಿಯಲಿದೆ ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ: ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್ ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ
ಇನ್ನು ಬೆಳಗಾವಿಯಲ್ಲಿ ವಾಣಿಜ್ಯ ಎಲ್ಪಿಜಿ (LPG) ಸಿಲಿಂಡರ್ಗಳ ತೀವ್ರ ಅಭಾವ ಸೃಷ್ಟಿ, ಹೋಟೆಲ್ ಅಕ್ಷರಶಃ ಕಂಗಾಲಾಗಿದ್ದಾರೆ.ಕೇವಲ ಮೂರೇ ದಿನಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಬರೋಬ್ಬರಿ 500 ರಿಂದ 600 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ 1,600 ರೂಪಾಯಿಗೆ ಸಿಗುತ್ತಿದ್ದ ಸಿಲಿಂಡರ್ ಬೆಲೆ ಈಗ 2,200 ರೂಪಾಯಿಗೆ ತಲುಪಿದೆ. ಹೆಚ್ಚು ಹಣ ಕೊಡುತ್ತೇವೆ ಎಂದರೂ ಸಿಲಿಂಡರ್‌ಗಳು ಸಿಗುತ್ತಿಲ್ಲ” ಎಂದು ಸೂಚಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ