Headlines

ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗೊಂದಲ: ಸಾರಿಗೆ ಇಲಾಖೆಯ ಸ್ಪಷ್ಟನೆ

ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗೊಂದಲ: ಸಾರಿಗೆ ಇಲಾಖೆಯ ಸ್ಪಷ್ಟನೆ

ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗೊಂದಲ: ಸಾರಿಗೆ ಇಲಾಖೆಯ ಸ್ಪಷ್ಟನೆ

2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾದ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈ ನಿಯಮವನ್ನು ಹಿಂಪಡೆದಿದೆ ಎಂಬ ಸುಳ್ಳು ಸುದ್ದಿಗಳನ್ನು ನಂಬದಂತೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ಹೈಕೋರ್ಟ್ ಕೂಡ ಯಾವುದೇ ತಡೆಯಾಜ್ಞೆ ನೀಡಿಲ್ಲ ಎಂದು ತಿಳಿಸಿದೆ.

ರಾಜ್ಯದಲ್ಲಿ ಹಳೆಯ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ. ಈ ಬಗ್ಗೆ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಕೆ ಮಾಡಬೇಕು ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಕೆಲವು ಮಾಧ್ಯಮಗಳಲ್ಲಿ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ ನಿಯಮವನ್ನು ಸಾರಿಗೆ ಇಲಾಖೆ ಹಿಂಪಡೆದಿದೆ. ಹೀಗಾಗಿ ಕಡ್ಡಾಯವಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದ್ದು, ಯಾವುದೇ ವದಂತಿ ನಂಬಬೇಡಿ ಎಂದು ಮನವಿ ಮಾಡಿದೆ.

2019ರ ಏ.1ಕ್ಕಿಂತ ಮುಂಚಿತವಾಗಿ ನೋಂದಣಿಯಾದ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಎಚ್‌ಎಸ್ಆರ್‌ಪಿ ಅಳವಡಿಕೆ ಸಂಬಂಧ ಹೈಕೋರ್ಟ್‌ ರಿಟ್‌ ಅರ್ಜಿ ಆಲಿಸಿ ಪ್ರಕರಣ ಇತ್ಯರ್ಥಪಡಿಸುವಂತೆ ಏಕಸದಸ್ಯ ಪೀಠಕ್ಕೆ ವರ್ಗಾಯಿಸಿದೆ. ಆ ಆದೇಶದಲ್ಲೂ ಸಾರಿಗೆ ಇಲಾಖೆ ಆದೇಶಕ್ಕೆ ಯಾವುದೇ ತಡೆಯಾಜ್ಞೆ ನೀಡಿಲ್ಲ. ಬದಲಿಗೆ ಎಚ್ಎಸ್‌ಆರ್‌ಪಿ ವಿಷಯದಲ್ಲಿ ತರಾತುರಿ ಕ್ರಮ ಕೈಗೊಳ್ಳದಂತೆ ನಿರ್ದೇಶಿಸಿದೆ. ತಡೆಯಾಜ್ಞೆ ನೀಡದ ಹಿನ್ನೆಲೆಯಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ ನಿಯಮ ಮುಂದುವರೆದಿದೆ ಎಂದು ಸಾರಿಗೆ ಇಲಾಖೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.

ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿ ಪ್ರಸಾರ ಆಗುತ್ತಿರುವುದು ಇಲಾಖೆ ಗಮನಕ್ಕೆ ಬಂದಿದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ ಕೇಂದ್ರ ಸರ್ಕಾರ 2018ರ ಡಿ.4 ರಂದು ಅಧಿಸೂಚನೆ ಹೊರಡಿಸಿದೆ.

Source link

Leave a Reply

Your email address will not be published. Required fields are marked *