Headlines

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಸಾರಿಗೆ ನಿಗಮಗಳಿಗೆ ಶಕ್ತಿ ಅಲ್ಲ, ಶಾಪ! 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಸಾರಿಗೆ ನಿಗಮಗಳಿಗೆ ಶಕ್ತಿ ಅಲ್ಲ, ಶಾಪ! 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ


ಬೆಂಗಳೂರು, ಡಿಸೆಂಬರ್ 18: ಕಾಂಗ್ರೆಸ್ (ಕಾಂಗ್ರೆಸ್) ಪಕ್ಷವು ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿ ಯೋಜನೆಗಳಲ್ಲಿ (ಖಾತರಿ ಯೋಜನೆಗಳು) ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ 2025ರ ನವೆಂಬರ್ 25ರವರೆಗೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಸರ್ಕಾರವು 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತದ ಬಾಕಿ ಉಳಿಸಿಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಒಟ್ಟಾರೆ 4,006.47 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಇದರ ಪರಿಣಾಮವಾಗಿ ಸಾರಿಗೆ ಸಂಸ್ಥೆಗಳು ಗಂಭೀರ ನಷ್ಟದ ಹಾದಿಗೆ ತಳ್ಳಿವೆ.

ನಾಲ್ಕು ನಿಗಮಗಳಿಗೆ ಯಾವ ವರ್ಷ ಎಷ್ಟು ಹಣ ಪಾವತಿ ಬಾಕಿ?

  • 2023–24ನೇ ಸಾಲಿನಲ್ಲಿ 1,180.62 ಕೋಟಿ ರೂ.
  • 2024–25ನೇ ಸಾಲಿನಲ್ಲಿ 1,170.45 ಕೋಟಿ ರೂ.
  • 2025–26ನೇ ಸಾಲಿನ ನವೆಂಬರ್ 25 ರ ಅಂತ್ಯಕ್ಕೆ 1,655.40 ಕೋಟಿ ರೂ.
  • ಒಟ್ಟು 4,006.47 ಕೋಟಿ ರೂ.

ಸತ್ಯ ನುಡಿದ ಅಂಕಿಅಂಶಗಳು!

ಶಕ್ತಿ ಯೋಜನೆ ಅಡಿಯಲ್ಲಿ ಇದುವರೆಗೆ 650 ಕೋಟಿ ಟಿಕೆಟ್ ವಿತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರ್ಜರಿ ಪ್ರಚಾರ ನಡೆಸಿದರು. ಸಾರಿಗೆ ನಿಗಮಗಳು ಆರ್ಥಿಕ ನಷ್ಟದಲ್ಲಿಲ್ಲ, ಲಾಭದಲ್ಲಿವೆ ಎಂದು ಹೇಳಿದ್ದರು. ಆದರೆ, ವಾಸ್ತವದಲ್ಲಿ ಶಕ್ತಿ ಯೋಜನೆ ಬಾಕಿ ಹಣದಿಂದ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಯಾವ ಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ಸರ್ಕಾರ ನೀಡಿರುವ ಅಧಿಕೃತ ಅಂಕಿ-ಅಂಶ ಸ್ಪಷ್ಟವೇ ಸಾಕ್ಷಿಯಾಗಿದೆ.

ಕರ್ನಾಟಕದ ಸಾರಿಗೆ ನಿಗಮಗಳು ಸತತವಾಗಿ ಭಾರೀ ನಷ್ಟವನ್ನು ಅನುಭವಿಸುತ್ತಿವೆ, ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತರ ಸರ್ಕಾರದಿಂದ ಹಣ ಪಾವತಿ ಸರಿಯಾಗಿ ಆಗದೇ ನಷ್ಟ ಹೆಚ್ಚಾಗಿರುತ್ತದೆ. ಕಾಂಗ್ರೆಸ್ ಸರ್ಕಾರವು ಸಾರಿಗೆ ನಿಗಮಗಳನ್ನು ನಷ್ಟದ ಸುಳಿಯಿಂದ ಹೊರತರುವ ಬದಲು, ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಅಂಕಿಅಂಶಗಳು ಆರೋಪಗಳಿಗೆ ಪುಷ್ಟಿ ನೀಡಿವೆ.

ಇದನ್ನೂ ಓದಿ: NWKRTC ಗೆ ಬಾರದ 940 ಕೋಟಿ ಶಕ್ತಿ ಯೋಜನೆ ಹಣ: ಸಂಕಷ್ಟದಲ್ಲಿ ನಿಗಮ

ಕಾಂಗ್ರೆಸ್ ಸರ್ಕಾರವು ಸಾರಿಗೆ ನಿಗಮಗಳನ್ನು ಸಂಪೂರ್ಣವಾಗಿ ನಷ್ಟದಿಂದ ಮೇಲಕ್ಕೆತ್ತಲು ವಿಫಲವಾಗಿದೆ, ಅವುಗಳ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಿರುವುದು ಸ್ಪಷ್ಟವಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *