Headlines

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ


ಬೆಂಗಳೂರು, ಡಿಸೆಂಬರ್ 18: ಬಿಪಿಎಲ್ ಕಾರ್ಡ್ ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (ಅಕ್ಕಿ) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿದೆ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (ಕಾಂಗ್ರೆಸ್) ಮುಖಂಡರಿಂದಲೇ ಅಕ್ಕಿ ಮಾರಾಟದ ದಂಧೆ ಈ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ ಭುಗಿಲೆದ್ದಿದೆ.

ಎರಡು ಗುಂಪುಗಳ ನಡುವೆ ಗಲಾಟೆ

ಕರ್ನಾಟಕ ರಾಷ್ಟ್ರ ಸಮಿತಿ ಹಾಗೂ ಅಲೀಮ್ ಎಂಬ ಕಾಂಗ್ರೆಸ್ ಮುಖಂಡರ ಮಧ್ಯೆ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟದ ನೆಪದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಕಾಂಗ್ರೆಸ್ ಮುಖಂಡ ಅಲೀಮ್ ಎಂಬುವವರಿಂದ ಕಾನೂನು ಬಾಹಿರವಾಗಿ ಬಿಪಿಎಲ್ ಕಾರ್ಡ್‌ದಾರರಿಂದ ಅಕ್ಕಿ ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಆರೋಪಿಸಿದೆ. ಅಷ್ಟೇ ಅಲ್ಲದೆ ಕೆಆರ್‌ಎಸ್ ಪಕ್ಷದ ಅಕ್ರಮವಾಗಿ ಅಕ್ಕಿ ಸಾಗಾಟ ನಡೆಸುತ್ತಿರುವವರನ್ನು ಹಿಡಿದು ಪೊಲೀಸ್ ಠಾಣೆಗೆ ಕರೆತಂದಿದ್ದರು.

ಇದನ್ನೂ ಓದಿ: ಕರ್ನಾಟಕದ ಅನ್ನಭಾಗ್ಯ ಅಕ್ಕಿ ದುಬೈನಲ್ಲಿ ಮಾರಾಟವಾಗುತ್ತಿದ್ಯಾ? ಕಾಂಗ್ರೆಸ್-ಬಿಜೆಪಿ ಜಟಾಪಟಿ

ಇನ್ನು ಕೆಆರ್ ಎಸ್ ಪಕ್ಷದ ಮುಖಂಡರ ಆರೋಪವನ್ನು ಅಲೀಮ್ ಅಲ್ಲಗೆಳೆದಿದ್ದಾರೆ. ಸದ್ಯ ಕುಮಾರಸ್ವಾಮಿ ಲೇಔಟ್ ಸ್ಟೇಷನ್ ಸುತ್ತಮುತ್ತಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂಥಾಗಿದೆ. 300ಕ್ಕೂ ಹೆಚ್ಚು ಅಲೀಮ್ ಬೆಂಬಲಿಗರು ಹಾಗೂ ಕೆಆರ್‌ಎಸ್‌ನಲ್ಲಿ ಸೇರಿದ್ದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸದ್ಯ ಎರಡು ಕಡೆಯ ಗುಂಪುಗಳನ್ನು ಚದುರಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಅಲೀಮ್ ದಂಧೆ ನಡೆಸುತ್ತಿದ್ದಾನೆ: ರಘುಪತಿ ಭ

ಇನ್ನು ಈ ಬಗ್ಗೆ ಕೆಆರ್‌ಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್ ಮಾತನಾಡಿದ್ದು, ಹಲವು ದಿನಗಳ ಹಿಂದೆ ಈ ರೀತಿ ಅಕ್ರಮವಾಗಿ ಬಿಪಿಎಲ್ ಅಕ್ಕಿ ಮಾರಾಟದ ಮಾಹಿತಿ ಸಿಕ್ತು. ನಾವು ಪೂರ್ವ ತಯಾರಿ ಮಾಡಿಕೊಂಡು ಅಕ್ಕಿ ತುಂಬಿಸಿಕೊಂಡು ಹೋಗುತ್ತಿದ್ದ ಜನರನ್ನು ಹಿಡಿದಿದ್ದೇವೆ. ಸುಮಾರು 45 ಅಕ್ಕಿ ಚೀಲಗಳನ್ನು ನಾವು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಯಾದಗಿರಿ: ಶಾಲಾ ಮಕ್ಕಳ ಬಿಸಿಯೂಟಕ್ಕೆ ಹುಳ ಬಿದ್ದಿರೋ ಅಕ್ಕಿ ಬೇಳೆ; TV9 ರಿಯಾಲಿಟಿ ಚೆಕ್ ನಲ್ಲಿ ಬಯಲಾಯ್ತು ಅಸಲಿಯತ್ತು

ಅಲೀಮ್ ಎಂಬ ಕಾಂಗ್ರೆಸ್ ಮುಖಂಡನೇ ಈ ದಂಧೆಯನ್ನು ನಡೆಸುತ್ತಿದ್ದಾನೆ. ಮುಂದಿನ ಚುನಾವಣೆಯಲ್ಲಿ ನಿಲ್ಲಬೇಕು ಅಂತ ಅಲೀಮ್ ಪ್ಲಾನ್ ಮಾಡಿಕೊಂಡಿದ್ದಾನೆ. ಯಲಚೇನಹಳ್ಳಿ, ಇಲಿಯಾಸ್ ನಗರ ಸುತ್ತಮುತ್ತ ಆತನ ಹಾವಳಿ ಮಿತಿಮೀರಿದೆ. ನಾವು ಕೆಆರ್‌ಎಸ್ ಪಕ್ಷದ ಸಕ್ರಿಯವಾಗಿ ಸಮಾಜಸೇವೆಯಲ್ಲಿ ತೊಡಗಿದ್ದೇವೆ. ನಮ್ಮ ಜನಪ್ರಿಯತೆಯನ್ನು ಸಹಿಸಲು ಆಗದೆ ಈ ರೀತಿ ಹಗೆ ಸಾಧಿಸುತ್ತಿದ್ದಾನೆ. ಅವನ ಅಕ್ರಮಗಳನ್ನು ಬಯಲಿಗೆ ಎಳೆದಿದ್ದಕ್ಕಾಗಿ ನಮಗೆ ಬೆದರಿಕೆ ಹಾಕುತ್ತಿದ್ದಾರೆ. ಅವರ ಕಡೆಯ 200 ಹುಡುಗರನ್ನು ಕರೆಸಿ ಹಲ್ಲೆ ಮಾಡಲು ಯತ್ನಿಸುತ್ತಿದ್ದಾರೆ. ನಾವು ಕಾನೂನು ಹೋರಾಟ ಮಾಡುತ್ತೇವೆ. ನಮಗೆ ರಕ್ಷಣೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *