
ಕಾರವಾರ, ಮಾರ್ಚ್ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (ಗೋಪಾಲಕೃಷ್ಣ ನಾಯಕ್) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಒಂದು ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಕಾಣಿಸಿಕೊಳ್ಳುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕಾಗಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಹುಡುಕಲು ಪ್ರಯತ್ನಿಸುತ್ತಿದ್ದಾರೆ.
ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಾಡಹಗಲೇ ವ್ಯಕ್ತಿನನ್ನ ಅಟ್ಟಾಡಿಸಿ ಹೊಡೆದಿರುವ ದೃಶ್ಯ ನಿಜಕ್ಕೂ ಎದೆಯನ್ನು ಎಣಿಸುವಂತಹದು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಿನ್ನೆ ನಡೆದ ಘಟನೆ ಬೆನ್ನಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ
ನಂತರ ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡನೋರ್ವನ ಹತ್ಯೆ ಯತ್ನದ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ಹೇರ್ ಸಲೂನ್ ಗೆ ಬಂದು ವಾಪಾಸಾಗುತ್ತಿದ್ದ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ಆರೇಳು ಜನರ ಗುಂಪು ಸುತ್ತುವರಿದಿದೆ. ಜೊತೆಗೆ ಅವರ ಹತ್ಯೆಗೆ ಪ್ರಯತ್ನಿಸಿತ್ತು. ಗೋಪಾಲರನ್ನ ರಕ್ಷಿಸಲು ಸಹೋದರ ರಾಘವೇಂದ್ರ ಮುಂದಾಗಿದ್ದಾರೆ ಅದೃಷ್ಟವಶಾತ್ ಗೋಪಾಲ್ ಅವರು ತಮ್ಮ ಪ್ರಾಣ ಉಳಿಸಿದ್ದಾರೆ. ಪ್ರಸ್ತುತ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಲ್ವರ ಬಂಧನ
ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕಾರವಾರದ ಮಾಜಾಳಿ ಚೆಕ್ ಪೋಸ್ಟ್ ನಂತರ ವಶಕ್ಕೆ ಪಡೆಯಲಾಗಿದೆ. ದಾಳಿಕೋರರು ಅಂಕೋಲಾದಲ್ಲಿ ಪತ್ತೆಯಾದ ದೃಶ್ಯ ಆಯಾ ಕಡೆಯಿಂದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಂಧಿತರ ಫೋಟೋ ಕೂಡ ವೈರಲ್ ಆಗಿದೆ. ಬಂಧಿತ ನಾಲ್ವರು ಗೋವಾ ಮೂಲದವರಾಗಿದ್ದಾರೆ. ಜಾಕೀರ್, ನೈಜಲ್, ಸದ್ದಾಂ ಹಾಗೂ ಇರ್ಪಾನ್ ಬಂಧಿತರು. ಘಟನೆಗೆ ಎರಡು ಬೈಕ್ ಹಾಗೂ ಕಾರು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ದೀಪನ್ ಎಂ ಎನ್ ಹೇಳಿದ್ದಾರೆ.
ಬಂಧಿತರು ಗೋವಾದವರಾಗಿದ್ದರೆ, ಬೌನ್ಸರ್, ಇನ್ನೋರ್ವ ವೆಲ್ಡರ್, ಮತ್ತೋರ್ವ ರಿಯಲ್ ಎಸ್ಟೇಟ್ ಮತ್ತು ಇನ್ನೋರ್ವ ಡ್ರೈವರ್ ಆಗಿದ್ದಾರೆ. ಆದರೆ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಗೋವಾ ಸೇರಿದಂತೆ ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಆಗಾಗ ಅಂಕೋಲಾಕ್ಕೆ ಬಂದು ಹೋಗುತ್ತಿದ್ದರು. ಮೂರು ದಿನಗಳ ಹಿಂದೆ ಅಂಕೋಲಾದಲ್ಲಿ ಬೀಬಿಟ್ಟದ್ದು ನಿನ್ನೆ ಬೆಳಗಿನ ವೇಳೆ ಹತ್ಯೆಗೆ ಯತ್ನಿಸಿದ್ದಾರೆ. ಒಟ್ಟಿನಲ್ಲಿ ಹತ್ಯೆಗೆ ಯತ್ನಿಸಿರುವುದು ರಾಜಕೀಯ ಕಾರಣಕ್ಕೆ, ವ್ಯವಹಾರದ ಸಂಬಂಧದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕಾರವಾರ: ಅನಿಲ ನಡುವೆ ನಡುವೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ಬಿಗ್ ಫೈಟ್
ಒಟ್ಟಿನಲ್ಲಿ ಹಾಡಹಗಲೇ ಅಂಕೋಲ ಪಟ್ಟಣದಲ್ಲಿ ನಡೆದ ಈ ದಾಳಿ ಎಲ್ಲರನ್ನ ಬೆಚ್ಚಿಬೀಳಿಸಿದೆ. ರಾಜಕೀಯದಲ್ಲಿ ಕಳೆದ ಕೆಲ ದಿನಗಳಿಂದ ಯುವ ಸಮುದಾಯದ ಸ್ನೇಹವನ್ನು ಗಳಿಸುತ್ತಿದ್ದ ಗೋಪಾಲಕೃಷ್ಣ ಅವರಿಗೆ ಸಹಿಸಲಾಗದವರು ಅಥವಾ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡವರಿಂದ ಈ ಕೃತ್ಯ ನಡೆದಿರುವುದು ಗೊತ್ತಾಗುತ್ತಿದೆ. ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಮುಂದಿನ ದಿನಗಳಲ್ಲಿ ಯಾವ ಸಂಬಂಧ ಘಟನೆ ನಡೆದಿದೆ ಎಂಬುದು ಗೊತ್ತಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.