ಬಾಗಲಕೋಟೆ, ನವೆಂಬರ್ 05: ಅನಾರೋಗ್ಯದ ಹಿನ್ನಲೆ ಮರತಪಟ್ಟ ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ. ಕುರುಬ ಸಮುದಾಯದ ಸಂಪ್ರದಾಯದಂತೆ ನಡೆದ ಅಂತ್ಯಸಂಸ್ಕಾರ ನಡೆದಿದ್ದು, ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಹೆಚ್.ವೈ.ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆದಿದೆ. ಪೊಲೀಸರು ಮೂರು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದ್ದು, ಹೆಚ್.ವೈ.ಮೇಟಿ ಪುತ್ರರಿಗೆ ರಾಷ್ಟ್ರಧ್ವಜವನ್ನು ಸಿಎಂ ಸಿದ್ದರಾಮಯ್ಯ ಹಸ್ತಾಂತರಿಸಿದರು.ಹೆಚ್.ವೈ.ಮೇಟಿ ಅಂತ್ಯಕ್ರಿಯೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಭೈರತಿ ಸುರೇಶ್, ಹೆಚ್.ಸಿ.ಮಹದೇವಪ್ಪ, ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.