
ಬೆಂಗಳೂರು, ಮಾರ್ಚ್ 22: ಸಾಕಷ್ಟು ಲೆಕ್ಕಾಚಾರಗಳ ಬಳಿಕ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್ ಕೊನೆಗೂ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಬಾಗಲಕೋಟೆಯಿಂದ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣದಿಂದ ಶಾಮನೂರು ಕುಟುಂಬದ ಸಮರ್ಥ್ ಅಭ್ಯರ್ಥಿಯಾಗಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಬಹಳ ಹೆಚ್ಚಿದ್ದು, ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಹಿನ್ನೆಲೆ ಅಳೆದು ತೂಗಿ, ಕೆಲ ನಾಯಕರ ಮನವೊಲಿಸಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಆ ಮೂಲಕ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್ ನಿಂದ ಉಮೇಶ್ ಮೇಟಿ ಸ್ಪರ್ಧೆ ಏರ್ಪಟ್ಟಿದ್ದಾರೆ ಇತ್ತ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿಯ ಶ್ರೀನಿವಾಸ್ ಟಿ. ದಾಸಕರಿಯಪ್ಪ ವಿರುದ್ಧ ಸಚಿವ ಎಸ್ .ಎಸ್ . ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಅಖಾಡಕ್ಕಿಳಿದಿದ್ದಾರೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)