ಚಪ್ಪಲಿಯಲ್ಲಿ ಹೊಡೆಸಿ ಬೆಂಕಿ ಹಾಕಿಸ್ತೀನಿ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಕಾಂಗ್ರೆಸ್ ರಾಜ್ಯ ಸಂಯೋಜಕ

ಚಪ್ಪಲಿಯಲ್ಲಿ ಹೊಡೆಸಿ ಬೆಂಕಿ ಹಾಕಿಸ್ತೀನಿ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಕಾಂಗ್ರೆಸ್ ರಾಜ್ಯ ಸಂಯೋಜಕ


ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ

ಚಿಕ್ಕಬಳ್ಳಾಪುರ, ಜನವರಿ 14: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಕಾಂಗ್ರೆಸ್ (ಕಾಂಗ್ರೆಸ್) ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲೀಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಗಂಭೀರ ಆರೋಪ ಕೇಳಿಬಂದಿದೆ. ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ಗೆ ಕೋಪಗೊಂಡು, ದೂರವಾಣಿ ಕರೆ ಮೂಲಕ ಅವ್ಯಾಚ್ಯ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಆರೋಪಿತ ರಾಜೀವ್ ಗೌಡ ಅವರು ಕೆಪಿಸಿಸಿ ರಾಜ್ಯ ಸಂಯೋಜಕರಾಗಿದ್ದರೆ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ದೂರವಾಣಿ ಕರೆ ವೇಳೆ ‘ಬೆಂಕಿ ಹಾಕಿ ಸುತ್ತು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ದಂಗೆ ಮಾಡುತ್ತೇನೆ’ ಎಂದು ಗಂಭೀರ ಬೆದರಿಕೆ ಹಾಕಲಾಗಿದೆ ಎಂದು ಪೌರಾಯುಕ್ತೆ ಅಮೃತಾ ಗೌಡ ದೂರಿದ್ದಾರೆ.

ಈ ವೇಳೆ ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಅವರ ಮೇಲೂ ಅವ್ಯಾಚ್ಚ ಹಾಗೂ ಅಶ್ಲೀಲ ಪದಗಳಿಂದ ನಿಂದನೆ ನಡೆದಿದ್ದು, ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರಿಗೆ ಅವಮಾನ ಮಾಡಲಾಗಿದೆ.

ಇದನ್ನೂ ಓದಿ: ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕರಿಗೂ ಅಶ್ಲೀಲ ಕಾಮೆಂಟ್ ಕಾಟ

ಈ ಶಿಡ್ಲಘಟ್ಟ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಭಯಭೀತಗೊಂಡಿದ್ದು, ಸಾರ್ವಜನಿಕ ಸೇವೆಯನ್ನು ನಿರ್ವಹಿಸುವ ಅಧಿಕಾರಿಗಳಿಗೆ ಈ ರೀತಿಯ ಬೆದರಿಕೆಗಳು ಅಸಹ್ಯಕರ ಎಂಬ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣಕ್ಕೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 10:02 am, ಬುಧವಾರ, 14 ಜನವರಿ 26



Source link

Leave a Reply

Your email address will not be published. Required fields are marked *