ಬಳ್ಳಾರಿಯಲ್ಲಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಬಳ್ಳಾರಿಯಲ್ಲಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್


ಬಳ್ಳಾರಿ, ಜನವರಿ 2: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಗುಂಡೇಟಿಗೆ ಬಲಿಯಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬುಲೆಟ್ನ ಮೂಲದ ಘಟನೆಯ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ಯಾರ ಗನ್ನಿಂದ ಬುಲೆಟ್ ಬಂದಿದೆ ಎಂಬುದು ಗೊತ್ತಾಗಬೇಕು. ಅದು ಬಿಜೆಪಿ ಅವರ ಗನ್ನಿಂದ ಬಂದಿದೆಯಾ? ಇಲ್ಲ ಕಾಂಗ್ರೆಸ್ನವರ ಗನ್ನಿಂದ ಬಂದಿದೆಯಾ?” ಎಂದು ಕಲಿಯಬೇಕಿದೆ ಎಂದು ಸಿಎಂ ಹೇಳಿದ್ದಾರೆ.

ಬಳ್ಳಾರಿ ಪೊಲೀಸ್ ವರಿಷ್ಠರು ಖಾಸಗಿ ಬುಲೆಟ್ ಎಂದು ಮಾಹಿತಿ ನೀಡಿದ್ದಾರೆ. ಸತೀಶ್ ರೆಡ್ಡಿ ಅವರು ತಮ್ಮ ಭದ್ರತೆಗಾಗಿ ಗನ್ ಇಟ್ಟುಕೊಂಡಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ರಾಜಶೇಖರ್ ರೆಡ್ಡಿ ಅವರಿಗೆ ತಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ರಾಜಶೇಖರ್ ರೆಡ್ಡಿ ಅವರ ಸಾವಿಗೆ ಕಾರಣವಾದ ಬುಲೆಟ್ ಮತ್ತು ಗನ್‌ನ ಮೂಲದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *