
ಬಾಗಲಕೋಟೆ, ಮಾರ್ಚ್ 30: ಉಪಚುನಾವಣೆ ಹಿನ್ನೆಲೆ ಬಿಜೆಪಿ ರೋಡ್ ಶೋ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರು ಎಂಟ್ರಿಕೊಟ್ಟ ಪರಿಣಾಮ ಕಾರ್ಯಕರ್ತರ ಮಧ್ಯೆ ನೂಕಾಟ-ತಳ್ಳಾಟ ನಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಮಧ್ಯೆ ಬೈಕ್ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಕಾರ್ಯಕರ್ತ ಯತ್ನಿಸಿದ್ದು, ಈ ವೇಳೆ ಗದ್ದಲ ಆರಂಭವಾಗಿದೆ. ಕಾಂಗ್ರೆಸ್ ಕಾರ್ಯಕರ್ತನನ್ನು ಕರೆದು ತಂದಿದ್ದು, ಈ ವೇಳೆ ಅದೇ ಪಕ್ಷದ ಕಾರ್ಯಕರ್ತರು ಕಿರುಚಾಡಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಅಂತಿಮವಾಗಿ ಕಾಂಗ್ರೆಸ್ ಕಾರ್ಯಕರ್ತನನ್ನು ಕೆಲ ಸ್ಥಳದಿಂದ ಕಳುಹಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.