ನವದೆಹಲಿ, ಫೆಬ್ರುವರಿ 28: ಕುಗ್ರಾಮದಲ್ಲಿ ಕೂತು ತಮಾಷೆಯ ವಿಡಿಯೋಗಳನ್ನು ಮಾಡುವವರಿಂದ ಹಿಡಿದು ಕಲಾವಿದರವರೆಗೂ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಕಂಟೆಂಟ್ ಹಾಕುವ ಜನರಿಗೆ ಖುಷಿಯ ಸುದ್ದಿ ಇದೆ. ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ಕಾಂಟೆಂಟ್ ಕ್ರಿಯೇಟರ್‌ಗಳಿಗೆ ತಮ್ಮ ಆದಾಯದಲ್ಲಿ ನ್ಯಾಯಯುತ ಹಂಚಿಕೆ ಮಾಡಬೇಕು ಎಂದು ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಒತ್ತಾಯಿಸಿದ್ದಾರೆ. ಡಿಜಿಟಲ್ ನ್ಯೂಸ್ ಪಬ್ಲಿಶನ್ಸ್ ಅಸೋಸಿಯೇಶನ್ (ಡಿಎನ್‌ಪಿಎ) ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮಾಧ್ಯಮ ವೃತ್ತಿಪರರು, ವಿಜ್ಞಾನಿ ಕಲಾವಿದರು, ಇನ್ಫ್ಲುಯೆನ್ಸರ್ಗಳು, ಬರಹಗಾರರು, ಸಂಶೋಧಕರು ಮೊದಲಾದವರು ಈ ಪ್ಲಾಟ್ಫಾರ್ಮ್ ಅನ್ನು ಬಳಸುವುದರಿಂದ ಅದರ ಮೌಲ್ಯದ ಹಂಚಿಕೆ ನ್ಯಾಯಯುತವಾಗಿದೆ. ಈ ಕ್ರಿಯೇಟರ್ಗಳು ಡಿಜಿಟಲ್ ಇಕೋಸಿಸ್ಟನ್ನ ಬೆನ್ನೆಲುಬಾಗಿರುತ್ತಾರೆ. ಆದರೂ ಕೂಡ ಹಲವರಿಗೆ ಸರಿಯಾದ ಮನ್ನಣೆಯಾಗಲೀ, ಸಂಭಾವನೆಯಾಗಲೀ ಸಿಕ್ಕುವುದಿಲ್ಲ’ ಎಂದು ಕೇಂದ್ರ ಮತ್ತು ಐಟಿ ಸಚಿವರಾದ ವೈಷ್ಣವ್ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ಕಾಶ್ಮೀರದ ಬಜೆಟ್ ನಿಮ್ಮ ಐಎಂಎಫ್ ಸಾಲಕ್ಕಿಂತ ಎರಡು ಪಟ್ಟು ದೊಡ್ಡದು: ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆಗೆ
‘ಮಾನವ ಅಭಿವೃದ್ಧಿಯು ಯಾವಾಗಲೂ ಕೂಡ ಪ್ರೋತ್ಸಾಹಕಗಳಿಂದ ಪ್ರೇರಿತವಾಗಿದೆ. ಪ್ರಾಮಾಣಿಕ ಕೆಲಸಕ್ಕೆ ನ್ಯಾಯಯುತವಾದ ಪ್ರಶಂಸೆ ಮತ್ತು ಬಹುಮಾನ ಸಿಗುವ ಖಚಿತ ಭರವಸೆಯ ಅಗತ್ಯವಿದೆ. ಕಾಂಟೆಂಟ್ ಕ್ರಿಯೇಟರ್‌ಗಳಿಗೆ ಉತ್ತೇಜನ ನೀಡಲು ಈ ರೀತಿಯ ಮನ್ನಣೆ ಬಹಳ ಮುಖ್ಯ’ ಎಂದು ಅಶ್ವಿನಿ ವೈಷ್ಣವ್ ಆಯ್ಕೆ ಮಾಡಿದ್ದಾರೆ.
ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಇನ್ನೂ ಹೆಚ್ಚು ಜವಾಬ್ದಾರಿಯುತವಾಗಿರಲಿ
ಡಿಎನ್‌ಪಿಎ ಕಾಂಕ್ಲೇವ್ 2026 ಕಾರ್ಯಕ್ರಮದಲ್ಲಿ ಅಶ್ಚಿನಿ ವೈಷ್ಣವ್ ಅವರು ಡೀಪ್‌ಫೇಕ್ ಇತ್ಯಾದಿ ಹಾವಳಿಯ ವಿಚಾರವನ್ನು ಪ್ರಸ್ತಾಪಿಸಿ, ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ಹೆಚ್ಚು ಜವಾಬ್ದಾರಿಯುತವಾಗಿರಲಿ ಎಂದು ಕರೆ ನೀಡಿದ್ದಾರೆ.
ಇದನ್ನೂ ಓದಿ: 1917ರಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಕೊಟ್ಟಿದ್ದ 35,000 ರೂ ಸಾಲ ವಾಪಸ್ ಕೇಳಲಿರುವ ಭಾರತೀಯ ಕುಟುಂಬ; ಈಗದರ ಮೌಲ್ಯ ಎಷ್ಟಿರಬಹುದು?
ಡೀಪ್‌ಫೇಕ್‌ನ ನಕಲಿ ಚಿತ್ರ, ಸುಳ್ಳು ಮಾಹಿತಿ ಪ್ರಸಾರ ಇತ್ಯಾದಿ ಅಪಾಯಗಳು ಹೆಚ್ಚುತ್ತಲೇ ಇವೆ, ವಿಶ್ವಾದ್ಯಂತ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಬಗ್ಗೆ ಸಾರ್ವಜನಿಕ ನಂಬಿಕೆ ಕಡಿಮೆ ಆಗುವ ಅಪಾಯವಿದೆ. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ತಮ್ಮಲ್ಲಿ ಸೇರ್ಪಡೆಯಾಗುವ ಕಾಂಟೆಂಟ್ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು. ಅಪಾಯಕಾರಿ ಕಾಂಟೆಂಟ್‌ಗಳನ್ನು ಗುರುತಿಸಿ ಕ್ರಮ ತೆಗೆದುಕೊಳ್ಳುವಂತಹ ವ್ಯವಸ್ಥೆ ರೂಪಿಸಬೇಕು ಎಂದು ವೈಷ್ಣವ್ ಹೇಳಿದ್ದಾರೆ.
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ