
ಮೈಸೂರು, ಅಕ್ಟೋಬರ್ 31: ಹುಲಿ ದಾಳಿಗೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದೆ. ಕಾಡಂಚಿನ ಜಮೀನಿನಲ್ಲಿ ಹಸು ಮೇಯುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ದಾಳಿಯಿಂದ ರೈತ ರಾಜಶೇಖರ್ ಅವರು ಇತ್ತೀಚೆಗಷ್ಟೇ ಮೃತ ಪಟ್ಟಿದ್ದರು. ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ.)