ಕಳ್ಳ ಕಾಕರ ಅಡ್ಡೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ: ಅವೈಜ್ಞಾನಿಕ ಕಾಮಗಾರಿಯಿಂದಲೂ ಸಮಸ್ಯೆ

ಕಳ್ಳ ಕಾಕರ ಅಡ್ಡೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ: ಅವೈಜ್ಞಾನಿಕ ಕಾಮಗಾರಿಯಿಂದಲೂ ಸಮಸ್ಯೆ


ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೆ

ರಾಮನಗರ, ಅಕ್ಟೋಬರ್ 31: ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಕಡಿಮೆಗೊಳಿಸುತ್ತದೆ ಮತ್ತು ಸುಗಮ ಸಂಚಾರದ ಉದ್ದೇಶದಿಂದ ನಿರ್ಮಿಸಲಾಗಿದೆ ಎಕ್ಸ್‌ಪ್ರೆಸ್ ವೇ ಸದಾ ಒಂದಿಲ್ಲೊಂದು ವಿಚಾರಗಳ ಪ್ರಾರಂಭದಿಂದಲೂ ಸುದ್ದಿಯಾಗುತ್ತಲೇ ಇದೆ. 118 ಕಿ.ಮೀ ಉದ್ದ ಮತ್ತು 6 ಪಥದ ರಸ್ತೆಯಲ್ಲಿ ಮೇಲಿಂದ ಮೇಲೆ ಅಪಘಾತಗಳು ನಡೆಯುತ್ತಿರುವ ಸುದ್ದಿಯ ನಡುವೆ ಅಪರಾಧಗಳು ಹೆಚ್ಚಾಗಿರುವುದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿದೆ.

‘ಪೊಲೀಸರನ್ನೇ ಕಳ್ಳರು ಬಿಟ್ಟಿಲ್ಲ’

ಒಟ್ಟು 8,479 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದ ಮೊದಲ ಎಕ್ಸ್‌ಪ್ರೆಸ್ ಹೈವೇ ನಿರ್ಮಾಣವಾಗಿದ್ದು, ಇದನ್ನು ಎರಡೂ ವರ್ಷಗಳ ಹಿಂದೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ರಸ್ತೆಯೀಗ ಕಳ್ಳರ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಸರ್ವೀಸ್ ರಸ್ತೆಯಲ್ಲಿ ದರೋಡೆ, ಕಳ್ಳತನ ಪ್ರಕರಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ರಾತ್ರಿ ವೇಳೆ ಬೈಕ್ ನಲ್ಲಿ ಬರುವ, ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿ ನಿದ್ರೆ ಮಾಡುವವರನ್ನೇ ಟಾರ್ಗೆಟ್ ಮಾಡಿ ಕಳ್ಳತನ, ದರೋಡೆ ಮಾಡುವ ಕೆಲಸಗಳು ವರದಿಯಾಗುತ್ತವೆ. ಇತ್ತೀಚೆಗೆ ತಮಿಳುನಾಡು ಪೊಲೀಸರನ್ನೇ ಇಲ್ಲಿ ಕಳ್ಳರು ದೋಚಿದ್ದಾರೆ ಎಂಬುದು ಸ್ಥಳೀಯರ ಆರೋಪ.

ಇದನ್ನೂ ಓದಿ: ಹಲೋ ಎಲ್ಲಾ ಕೇಳಿಸ್ಕೊಳ್ಳಿ: ವಿಡಿಯೋ ಮಾಡಿ ನವ ವಿವಾಹಿತ ಆತ್ಮಹತ್ಯೆ, ಹೆಂಡ್ತಿ ವಿರುದ್ಧ ಗಂಭೀರ ಆರೋಪ

ಒಂದು ಕಾಮಗಾರಿಯಿಂದ ಸಮಸ್ಯೆ

ಜೊತೆಗೆ ರಸ್ತೆ ಉದ್ಘಾಟನೆಗೊಂಡು ಎರಡು ವರ್ಷಗಳು ಕಳೆದರೂ ರಸ್ತೆಯ ಸರ್ವೀಸ್ ರಸ್ತೆಯ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ನಡೆದಿರುವ ಕಾಮಗಾರಿಯೂ ಅಪೂರ್ಣವಾಗಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಇರಬೇಕಿದ್ದ ಸಿಸಿ ಕ್ಯಾಮರಾಗಳನ್ನು ಕೂಡ ಅಳವಡಿಸಲಾಗಿಲ್ಲ. ಬೀದಿ ದೀಪಗಳು ಇಲ್ಲದಿರುವ ಜೊತೆಗೆ, ಪೊಲೀಸರ ಗಸ್ತು ಕೂಡ ಇಲ್ಲದೇ ಇರುವುದು ಕಳ್ಳರಿಗೆ ವರದಾನವಾಗಿದೆ. ಇದನ್ನೇ ಬಂಡವಾಳಮಾಡಿಕೊಂಡು ಪ್ರಯಾಣಿಕರ ಸುಲಿಗೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *