ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿರುವುದುಚಿತ್ರದ ಕ್ರೆಡಿಟ್ ಮೂಲ: tv9
ಗದಗ, ಫೆಬ್ರವರಿ 5: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, 10ಕ್ಕೂ ಹೆಚ್ಚು ಮಂದಿ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರದ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ಸ್ಥಳಕ್ಕೆ ರೋಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
(ಮಾಹಿತಿ ಅಪ್‌ಡೇಟ್ ಆಗಲಿದೆ)
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ