Headlines

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ಬೆಂಗಳೂರಿನ ವ್ಯಕ್ತಿಗೆ ಲಕ್ಷ ಲಕ್ಷ ಹಣ ಪಂಗನಾಮ

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ಬೆಂಗಳೂರಿನ ವ್ಯಕ್ತಿಗೆ ಲಕ್ಷ ಲಕ್ಷ ಹಣ ಪಂಗನಾಮ


ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ವಂಚನೆ

ಬೆಂಗಳೂರು, ನವೆಂಬರ್ 19: ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಿನಲ್ಲಿ ಸೈಬರ್ ವಂಚಕರು ಬೆಂಗಳೂರಿನ ವ್ಯಕ್ತಿಗೆ ಬರೋಬ್ಬರಿ 42 ಲಕ್ಷ ಪಂಗನಾಮ ಹಾಕಿದ್ದಾರೆ. ಅಧಿಕ ಲಾಭ ಸಿಗುವ ಆಸೆಯಿಂದ ಅಪರಿಚಿತ ವ್ಯಕ್ತಿ ನೀಡಿದ ಆಮಿಷ ನಂಬಿ ಹಣ ಹೂಡಿಕೆ ಮಾಡಿದ್ದಾತ ಈಗ ಇರುವ ಹಣವನ್ನೂ ಕಳೆದುಕೊಂಡಿದ್ದಾನೆ. ತಾನು ವಂಚನೆಗೆ ಒಳಗಾಗಿರುವ ಬಗ್ಗೆ ಅರಿವಾಗಿರುವುದರಿಂದ ಆತ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದೆ.

45 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ಇನ್ಸ್ಟಾಗ್ರಾಮ್ ಮೂಲಕ ದೊರೆತಿದೆ, ಅಶುತೋಷ್ ಶರ್ಮಾ ಎಂಬ ವ್ಯಕ್ತಿ ಕ್ರಿಪ್ಟೋ ಹೂಡಿಕೆಗಳ ಕುರಿತು ಮಾರ್ಗದರ್ಶನ ನೀಡುತ್ತಿದ್ದರು. ಬಳಿಕ ಇದಕ್ಕೆ ಸಂಬಂಧಿಸಿದ ಟೆಲಿಗ್ರಾಂ ಗುಂಪನ್ನೂ ವ್ಯಕ್ತಿಗೆ ಪರಿಚಯಿಸಿದ್ದ. ಹೂಡಿಕೆ ಹಣಕ್ಕೆ ಶೇ. 15ರಷ್ಟು ಲಾಭ ನೀಡುವ ಭರವಸೆ ಸಿಕ್ಕ ಹಿನ್ನಲೆಯಲ್ಲಿ ಸ್ವಲ್ಪ ಹಣವನ್ನ ಸಂತ್ರಸ್ತ ಹೂಡಿಕೆ ಮಾಡಿದೆ. ಈ ವೇಳೆ ಲಾಭ ತನ್ನ ಖಾತೆಗೆ ಜಮಾ ಆಗುತ್ತಿದ್ದ ಕಾರಣ ಆತ ಸೈಬರ್ ಖದೀಮರನ್ನು ಮತ್ತಷ್ಟು ನಂಬಿದ್ದ. ಇನ್ನೂ ಹಣವನ್ನು ಹೂಡಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ 14 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ; 8 ಬಗೆಯ ಅಪರೂಪದ ಪ್ರಾಣಿಗಳನ್ನು ವಶಕ್ಕೆ

ವ್ಯಕ್ತಿಯ ಟ್ರೇಡಿಂಗ್ ಖಾತೆಯಲ್ಲಿ 138,687.22 USDT ಬ್ಯಾಲೆನ್ಸ್ ತೋರಿಸುತ್ತಿದೆ. ಆದರೆ ಆ ಹಣವನ್ನು ಪಡೆಯಲು ಪ್ರಯತ್ನಿಸಿದಾಗ, ಆಪರೇಟರ್‌ಗಳ ಬ್ಯಾಂಕ್ ವಿವರಗಳು ತಪ್ಪಾಗಿದೆ ಎಂದು ಹೇಳಲಾಗಿದೆ. ಜೊತೆಗೆ ಅದನ್ನು ಸರಿಪಡಿಸಲು 4 ಲಕ್ಷ ಕೊಡಬೇಕೆಂದು ತಿಳಿಸಿದ್ದರು. ಬಳಿಕ ತಡ ಪಾವತಿ ದಂಡ, ಕರೆನ್ಸಿ ಪರಿವರ್ತನೆ ಶುಲ್ಕ ಮತ್ತು RBI ತೆರಿಗೆ ಹೆಸರಿನಲ್ಲಿ ಹೆಚ್ಚಿನ ಹಣದ ಬೇಡಿಕೆ ಇಟ್ಟರು. ಹೀಗಾಗಿ ತಾನು ಗಳಿಸಿದ್ದು ನಂಬಿದ್ದ ಹಣವನ್ನು ಪಡೆಯಲು ಹಾತೊರೆಯುತ್ತಿದ್ದ ವ್ಯಕ್ತಿ, ಡಿಜಿಟಲ್ ಸಾಲದಾತರಿಂದ ಹಾಗೂ ಸ್ನೇಹಿತರಿಂದ ಹಣ ಪಡೆದು ಅನೇಕ ಬಾರಿ ಆರೋಪಿಗಳ ವಿವಿಧ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ.

ಜುಲೈ 3 ರಿಂದ ಆಗಸ್ಟ್ 1 ರವರೆಗೆ ಒಟ್ಟು 42.62 ಲಕ್ಷ ರೂ. ಹಣವನ್ನು ದೂರುದಾರ ವ್ಯಕ್ತಿ ಗಳಿಸಿದರೂ ಆತ ಗಳಿಸಲು ಸಾಧ್ಯವಾಗಲಿಲ್ಲ. ಈ ವೇಳೆಗೆ ಇದು ವಂಚನೆ ಎಂದು ಆತನಿಗೆ ಜ್ಞಾನೋದಯವಾಗಿದೆ, ಅಪರಾಧಿಗಳನ್ನು ಪತ್ತೆ ಹಚ್ಚಿ ಹಣ ವಾಪಸ್ ಕೊಡಿಸಿ ಎಂದು ಪೊಲೀಸರ ಮೊರೆ ಹೋಗಿದ್ದಾನೆ. ಸಂತ್ರಸ್ತ ದೂರಿನ ಅನ್ವಯ ಕ್ರಿಪ್ಟೋ ವಾಲೆಟ್ ವಿವರಗಳು, ಫೋನ್ ಸಂಖ್ಯೆಗಳು ಮತ್ತು ಅನುಮಾನಾಸ್ಪದ ವೆಬ್ ಡೊಮೇನ್ ಪರಿಶೀಲನೆಗೆ ಮುಂದಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *