Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 24ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 24ರ ದಿನಭವಿಷ್ಯ


ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24 ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮಲ್ಲಿ ಕೆಲವರಿಗೆ ಹಳೇ ಗೆಳೆಯ ಅಥವಾ ಗೆಳತಿಯ ನೆನಪು ವಿಪರೀತ ಕಾಡುವಂಥ ದಿನ ಇದಿರಲಿದೆ. ಅಥವಾ ಅಚಾನಕ್ ಆಗಿ ಭೇಟಿ ಆಗುವುದೋ ಅಥವಾ ಕಾಲ್ ಮಾಡುವುದೋ ಇಂಥದ್ದು ಕೂಡ ಆಗಬಹುದು. ಹೀಗೆ ಆಗುವುದರಿಂದ ನಿಮ್ಮ ಏಕಾಗ್ರತೆ ಕಳೆದುಕೊಳ್ಳುವಂತೆ ಆಗಲಿದೆ. ಹೊಸ ವಾಹನ ಖರೀದಿ ಮಾಡಿದ್ದೀರಿ ಅಂತಾದಲ್ಲಿ ಚಾಲನೆ ವೇಳೆ ಮುಂಜಾಗ್ರತೆ ವಹಿಸಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ರೋಗಿಗಳಿಗೆ ಬಹಳ ಉತ್ತಮವಾದ ದಿನ ಇದೆ. ಹೆಚ್ಚಿನ ತರಬೇತಿಗಾಗಿ ವಿದೇಶಗಳಿಗೆ ಅಥವಾ ನೀವು ಇರುವ ಸ್ಥಳದಲ್ಲಿಯೇ ಅತ್ಯುತ್ತಮ ತರಬೇತಿ ಸಂಸ್ಥೆಗಳಿಗೆ ತೆರಳುವ ಅವಕಾಶ ಸೃಷ್ಟಿಯಾಗಲಿದೆ. ನಿಮ್ಮಲ್ಲಿ ಯಾರಿಗೆ ಸೋದರ- ಸೋದರಿಯರು ಇದ್ದಾರೋ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಮಾಡುವುದು ಒಳ್ಳೆಯದು. ಈ ದಿನ ನಿಮಗೆ ನಿಮ್ಮ ನೆರವಿನ ಅವಶ್ಯಕತೆ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನೀವು ಯಾವುದನ್ನು ಕನಿಷ್ಠ ಪ್ರಮಾಣದ ಶಿಸ್ತು ಎಂದು ಭಾವಿಸಿರುತ್ತೀರೋ ಇತರರಿಗೆ ಅದು ಕಿರಿಕಿರಿಯಾಗಲಿದೆ. ನೀವು ಸ್ವಂತ ವ್ಯವಹಾರ- ವ್ಯಾಪಾರ ಮಾಡುವವರು ಆಗಿದ್ದಲ್ಲಿ ಸನ್ನಿವೇಶಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕು. ನಿಮಗೆ ಹಿರಿಯರಿಂದ ಬಂದಂಥ ಒಡವೆ, ಆಸ್ತಿ ಇಂಥವುಗಳನ್ನು ಮಾರಾಟ ಮಾಡುವ ಆಲೋಚನೆ ಮಾಡಿದ್ದೇನೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *