ದೆಹಲಿ, ಅಕ್ಟೋಬರ್ 27: ಮೊಂತಾ ಚಂಡಮಾರುತ ನಾಳೆ ಆಂಧ್ರದ (ಆಂಧ್ರ ಪ್ರದೇಶ) ತೀರಕ್ಕೆ ಅಪ್ಪಳಿಸಲಿದೆ, ಭಾರಿ ಮಳೆಯ ಎಚ್ಚರಿಕೆ ಹಿನ್ನಲೆ ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕಾಕಿನಾಡ ಬಳಿಯ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆಯ ಬಗ್ಗೆಯೂ ಪರಿಶೀಲಿಸಲಾಗಿದೆ. ಚಂಡಮಾರುತ ಅಪ್ಪಳಿಸುವ ಭೀತಿ ಹಿನ್ನೆಲೆ ಒಡಿಶಾ ಮತ್ತು ತಮಿಳುನಾಡು ಕಡಲ ತೀರದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಕಡಲ ತೀರ ಪ್ರದೇಶಗಳಲ್ಲಿ ಹೈ ಅಲರ್ಟ್ ಎಂದು ಘೋಷಿಸಲಾಗಿದೆ, ಬಂಗಾಳ ಕೊಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.