ಮೈಸೂರು, ನವೆಂಬರ್ 28: ಕರ್ನಾಟಕ ರಾಜಕಾರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ತಾರಕಕ್ಕೇರಿರುವ ನಡುವೆ ಡಿ.ಕೆ. ಶಿವಕುಮಾರ್ ಅವರ ಅಭಿಮಾನಿಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು, ಬೆಳ್ಳಿ ಪಲ್ಲಕ್ಕಿಯಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯ ಪ್ರದಕ್ಷಿಣೆ ನಡೆಸಿ, ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿದರು. ಬೆಳ್ಳಿ ರಥದ ಮುಂಭಾಗದಲ್ಲಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಹಿಡಿದು ಅಭಿಮಾನಿಗಳು ಘೋಷಣೆ ಕೂಡ ಕೂಗಿದ್ದಾರೆ. ಈ ಹಿಂದೆ ಡಿ.ಕೆ. ಶಿವಕುಮಾರ್ ಕೂಡ ಚಾಮುಂಡೇಶ್ವರಿ ಸನ್ನಿಧಾನದ ಗರ್ಭಗುಡಿಯಲ್ಲಿ ಧ್ಯಾನ ಮಾಡಿದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.