
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಿತೀಯ ತಿಥಿಯ ಶನಿವಾರದಂದು ವ್ಯಕ್ತಿತ್ವದ ಪರೀಕ್ಷೆ, ಕಾರ್ಯಕ್ಕೆ ಕೃತಜ್ಞತೆ, ಹಣಕಾಸಿನ ಶಿಸ್ತು, ಪರರ ನಿಂದನೆ ಇವೆಲ್ಲವೂ ಈ ದಿನದ ವಿಶೇಷ.
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ವಾರ್ಷಿಕ : ವಸಂತ, ಚಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಿತೀಯ, ನಿತ್ಯನಕ್ಷತ್ರ : ಸ್ವಾತಿ, ಯೋಗ : ವ್ಯಾಘಾತ, ಕರಣ : ಬವ, 6 – ಸೂರ್ಯ1 – 5 – 5 – ಸೂರ್ಯ. pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:23 – 10:55, ಯಮಗಂಡ ಕಾಲ 13:59 – 15:32, ಗುಳಿಕ ಕಾಲ 06:19 – 07:51
ಮೇಷ ರಾಶಿ :
ಇಂದು ಸಂಬಂಧಗಳಲ್ಲಿ ನಿಮ್ಮ ನಂಬಿಕೆ ಉಳಿಸಿಕೊಳ್ಳಿ. ನಿಮ್ಮ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಪಕ್ಷಪಾತ ಮಾಡದೆ ನೀವು ಸಮಾನಭಾವದಿಂದ ನೋಡಿ. ದೇಹವನ್ನು ದಂಡಿಸಿ ಹೆಚ್ಚು ಲಾಭವನ್ನು ಗಳಿಸುವಿರಿ. ಕೆಲಸದಲ್ಲಿ ನಿಯಮಗಳಿಗೆ ಸಂಪೂರ್ಣ ಗಮನವನ್ನು ನೀಡುವುದು ಅವಶ್ಯಕ. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.’ ತನ್ನವರ ಬಗ್ಗೆ ನಂಬಿಕೆ ಇರದು. ಹಲವು ದಿನಗಳಿಂದ ನೀವು ಬಯಸಿದ್ದು ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ.
ವೃಷಭ ರಾಶಿ :
ನಿಮ್ಮ ನಾಯಕತ್ವದ ಸಾಮರ್ಥ್ಯ ಎಲ್ಲರಿಗೂ ಅರಿವಾಗಬಹುದು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು. ನಿಮಗೆ ಸ್ವಾಭಿಮಾವನ್ನು ಬಿಟ್ಟು ವ್ಯವಹರಿಸುವುದು ಸಾಧ್ಯವಾಗಲಿಲ್ಲ. ವ್ಯಾಪಾರ ಮಾಡುವ ಜನರ ಸಂತೋಷಕ್ಕೆ ಕೊನೆಯೇ ಇರುವುದಿಲ್ಲ. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಉದ್ಯೋಗದ ಕನಸನ್ನು ಕಾಣುತ್ತಾ ಇರುವಿರಿ. ಉತ್ತಮ ವಸ್ತುಗಳನ್ನು ಖರೀದಿಸಿ.
ಮಿಥುನ ರಾಶಿ :
ನಿಮ್ಮ ಕೆಲಸದಲ್ಲಿ ನೀವು ಹೆಚ್ಚು ಜವಾಬ್ದಾರಿಯಿಂದ ವರ್ತಿಸುವಿರಿ. ಕುಟುಂಬಕ್ಕೆ ನಿಮ್ಮಿಂದ ಶುಭ ವಾರ್ತೆಯು ಬರಬಹುದು. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ. ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಯವನ್ನು ಮಾಡಬಲ್ಲರು ಎಂಬ ದೃಢತೆಯು ಇರಲಿದೆ. ಭವಿಷ್ಯದ ಬಗ್ಗೆ ನಿಮಗೆ ಏನೇನೋ ಆಲೋಚನೆಗಳನ್ನು ಇಟ್ಟುಕೊಳ್ಳಿ. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸುತ್ತದೆ.
ಕರ್ಕಾಟಕ ರಾಶಿ :
ನಿಮ್ಮ ಧಾರ್ಮಿಕ ಭಾವನೆಗೆ ತೊಂದರೆಯಾಗಬಹುದು. ನೀವು ಈ ಹಿಂದೆ ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದರೆ, ನೀವು ಅದನ್ನು ಪಡೆಯಬಹುದು. ನಿಮ್ಮ ಉತ್ಸಾಹಕ್ಕೆ ಬೇಕಾದ ಮೆಚ್ಚುಗೆಯೇ ಸಿಗದಾದೀತು. ನಿಮ್ಮ ವೃತ್ತಿಜೀವನದಲ್ಲಿ ನಿಮಗೆ ಉತ್ತಮ ಅವಕಾಶ ಸಿಗುವ ಸಾಧ್ಯತೆಯಿದೆ. ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎಂದು ಅನ್ನಬಹುದು. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಸುತ್ತಾಡುವರು.
ಸಿಂಹ ರಾಶಿ :
ವ್ಯಾಪಾರಸ್ಥರಿಗೆ ದಿನವು ಅಲ್ಪ ಲಾಭದಾಯಕ ವಸ್ತು. ನಿಮ್ಮ ಆದಾಯಕ್ಕಿಂತ ಹೆಚ್ಚಿನ ಖರ್ಚು ಮಾಡುವುದನ್ನು ನೀವು ತಪ್ಪಿಸುವಿರಿ. ಹಳೆಯ ಸಾಲವನ್ನು ಉಳಿಸಿಕೊಂಡೇ ಮತ್ತೆ ಸಾಲವನ್ನು ಮಾಡಬೇಕಾದೀತು. ಒತ್ತಡದಲ್ಲಿ ನಿಮ್ಮ ಕೆಲಸದ ಪ್ರದೇಶದ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ ಮೇಲೆ ಆಗದೇ ಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪ್ರೀತಿಯಲ್ಲಿ ಸಡಿಲಿಕೆ ಬೇಡ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಪತ್ನಿಯಿಂದ ಪ್ರಚೋದಿತರಾಗುವಿರಿ.
ಕನ್ಯಾ ರಾಶಿ :
ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಕ್ರಿಯಾತ್ಮಕ ಕೆಲಸದಲ್ಲಿ ಉತ್ತಮ ಚಿಂತನೆ ಇರಲಿದೆ. ನಿಮ್ಮವರ ಕುರಿತ ವಿಮರ್ಶೆ ಸರಿಯಾಗಿ ಇರಲಿದೆ. ನೀವು ಏನಾದರೂ ದೊಡ್ಡದನ್ನು ಸಾಧಿಸಬೇಕು ಎಂಬ ಹಂಬಲವಿರಲಿದೆ. ಭೂಮಿಯ ವ್ಯವಹಾರವನ್ನು ನೀವು ಮಾಡುವುದು ಕಷ್ಟವೆನಿಸಬಹುದು. ನೀವು ಹೂಡಿಕೆ ವಿಷಯಗಳಲ್ಲಿ ಉತ್ತಮ ಆದಾಯವನ್ನು ಪಡೆಯುವ ಸಾಧ್ಯತೆಯಿದೆ. ಅತಿಯಾದ ಚಿಂತೆಯಿಂದ ಆರೋಗ್ಯ ಹಾಳು. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ಸಮಯಕ್ಕೆ ಸಿಗದು.
ತುಲಾ ರಾಶಿ :
ನಿಮ್ಮ ಮುಖ್ಯ ವಿಷಯಗಳು ಕುಟುಂಬದಲ್ಲಿ ಚರ್ಚೆಯಾಗಬಹುದು. ರಾಜಕೀಯದಲ್ಲಿ ಆಸಕ್ತಿಯಿದ್ದರೂ ಪ್ರವೇಶಕ್ಕೆ ದಾರಿಯ ಕೊರತೆ ಇದೆ ಎನ್ನಬಹುದು. ಯಾರನ್ನೋ ನಿಮಗೆ ಹೋಲಿಸಿಕೊಂಡು ಸಂಕಟಪಡುವಿರಿ. ಸಮಯದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳುತ್ತಾರೆ. ಅಲ್ಪ ಸಂತೋಷಕ್ಕೆ ಹಣವನ್ನು ಹಾಕುವಿರಿ. ದುಡಿಮೆ ನ್ಯಾಯದ ಪರವಾಗಿದೆ. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿಸುವುದು ಉತ್ತಮ.
ವೃಶ್ಚಿಕ ರಾಶಿ :
ಯಾರನ್ನೋ ನಂಬಿ ವಸ್ತುವನ್ನಾಗಿ ಕೊಟ್ಟುಹೋಗುವುದು ಬೇಡ. ಸಹೋದರಿಯಿಂದ ಹಣಕಾಸಿನ ಬೆಂಬಲವನ್ನು ಪಡೆದುಕೊಳ್ಳಿ. ಅನಗತ್ಯ ಕೆಲಸವನ್ನು ಮೈಮೇಲೆ ತಂದುಕೊಳ್ಳುವಿರಿ. ಸ್ನೇಹಿತರ ಅನಾರೋಗ್ಯಕ್ಕೆ ಸಹಕಾರಿ. ನಿಮ್ಮ ಜೀವನ ಸಂಗಾತಿಯ ಜೊತೆ ಉಪಯುಕ್ತವಾದ ವಿಚಾರದಲ್ಲಿ ಚರ್ಚೆ ಮಾಡುವಿರಿ. ಹೂಡಿಕೆಯ ಬಗ್ಗೆ ನಿಮ್ಮ ಸ್ನೇಹಿತರು ನಿಮ್ಮ ಜೊತೆ ಮಾತನಾಡಬಹುದು. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದಿತು.
ಧನು ರಾಶಿ :
ಮನೆಯ ವಿಷಯಕ್ಕೆ ಹೊರಗಿನವರನ್ನು ಸಂಪರ್ಕಿಸುವುದು ಬೇಡ. ನೀವೇ ಸರಿಮಾಡಿಕೊಳ್ಳಿ. ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಬೇಕು. ಕಛೇರಿಗೆ ಹೋಗಿ ಕೆಲಸ ಮಾಡುವ ಸನ್ನಿವೇಶ ಬರುವುದು. ನಿಮ್ಮ ಆತ್ಮೀಯರಿಂದ ನಿಮ್ಮ ಪ್ರೀತಿ ಮತ್ತು ವಿಶ್ವಾಸ. ನೂತನ ವಸ್ತ್ರ, ವಸ್ತುಗಳ ಖರೀದಿಗೆ ಹೆಚ್ಚು ಸಮಯವನ್ನು ಕೊಡಬೇಕಾದೀತು. ಸಂಗಾತಿಯ ಮನೋಭಾವವನ್ನು ಅನುಭವಿಸುವುದು ಕಷ್ಟವಾದೀತು. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು.
ಮಕರ ರಾಶಿ :
ಪ್ರಯಾಣ ಇಂದು ಬಹಳ ಬೇಸರ ಕೊಡುವುದು. ನಿಮ್ಮ ಸಂಗಾತಿಗೆ ನೀವು ಉಡುಗೊರೆಯನ್ನು ತಂದುಕೊಡುವಿರಿ. ಖರ್ಚಿನ ಬಗ್ಗೆ ಸ್ಥೂಲ ಚಿತ್ರಣವಿರಲಿ. ಅತಿಯಾದ ಉತ್ಸಾಹ, ನಂಬಿಕೆಯಿಂದ ನೀವು ತೊಂದರೆಗೆ ಸಿಲುಕುವಿರಿ. ನಿಮ್ಮ ಮಾರ್ಗವು ನೇರವಾಗಿರಲಿ. ಓಡಾಟದಲ್ಲಿ ಕೆಲವು ಅಡೆತಡೆಗಳು ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.
ಕುಂಭ ರಾಶಿ :
ವಹಿವಾಟಿನಲ್ಲಿ ದೊಡ್ಡ ಗುರಿಯನ್ನು ಸಾಧಿಸಲು ಸಾಧ್ಯ. ಇಂದಿನ ಕಛೇರಿಯ ಕಾರ್ಯವನ್ನು ಸಂತೋಷದಿಂದ ಮಾಡುವಿರಿ. ನಿಮ್ಮ ಮನಶ್ಚಾಂಚಲ್ಯವನ್ನು ಕಡಮೆ ಮಾಡಿಕೊಳ್ಳುವುದು ಉತ್ತಮ. ಮಕ್ಕಳಿಂದ ನೀವು ಒಳ್ಳೆಯ ಸುದ್ದಿಯನ್ನು ಕೇಳುವಿರಿ. ವೈಯಕ್ತಿಕ ವಹಿವಾಟಿನ ಬಗ್ಗೆ ನಿಮಗೆ ಸ್ಪಷ್ಟತೆ ಇರಲಿ. ಇಲ್ಲದಿದ್ದರೆ ಸಮಸ್ಯೆಗಳು. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸಿತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ಆತುರದಲ್ಲಿ ಯಾವ ಕೆಲಸವನ್ನೂ ಮಾಡಲು ಹೋಗುವುದು ಬೇಡ.
ಮೀನ ರಾಶಿ :
ಪ್ರತಿಭೆಯ ಪ್ರಕಾಶಕ್ಕೆ ಅವಕಾಶ. ಸಹಕಾರದ ಮನೋಭಾವವು ನಿಮ್ಮ ಮನಸ್ಸಿನಲ್ಲಿ ಇರುವುದು. ಎಲ್ಲರ ಜೊತೆ ಬೆರೆಯಲು ನೀವು ಇಷ್ಟಪಡುವಿರಿ. ಕುಟುಂಬ ವ್ಯವಹಾರದಲ್ಲಿ ಸಂಗಾತಿಯ ಸಲಹೆಯು ಉಪಯುಕ್ತವೆನಿಸಬಹುದು. ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಡೆಯುವ ಕಾರ್ಯಗಳಿಂದ ಮೌನವಹಿಸುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಸುಧಾರಿಸಿಕೊಂಡು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯಿಂದ ನಿಮಗೆ ಬೆಂಬಲ ಸಿಗುವುದು. ಬಹಳ ಮನೆಯಲ್ಲಿ ಕಾರ್ಯಗಳಿದ್ದು ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ.
-ಲೋಹಿತ ಹೆಬ್ಬಾರ್-8762924271 (ಯಾವ ಅಪ್ಲಿಕೇಶನ್ ಮಾತ್ರ)