
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 14 ಜನವರಿ 2026 ರ ದ್ವಾದಶ ರಾಶಿಗಳ ಫಲಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಬುಧವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಕೃಷ್ಣಪಕ್ಷ, ಏಕಾದಶಿ ಮತ್ತು ಅನುರಾಧ ನಕ್ಷತ್ರದಲ್ಲಿದೆ.
ಇಂದು ಭೋಗಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಇದು ಮಕರ ಸಂಕ್ರಾಂತಿಯ ಮುನ್ನಾ ದಿನದ ಹಬ್ಬವಾಗಿದೆ. ಈ ದಿನ ಮನೆಯಲ್ಲಿನ ಅನುಪಯುಕ್ತ ವಸ್ತುಗಳನ್ನು ದಹಿಸಿ ನಕಾರಾತ್ಮಕ ಶಕ್ತಿಯನ್ನು ದೂರ ಮಾಡುವ ಸಂಪ್ರದಾಯವಿದೆ. ಜೊತೆಗೆ, ಇಂದು ಮಧ್ಯಾಹ್ನ 3 ಗಂಟೆ 13 ನಿಮಿಷಕ್ಕೆ ರವಿ ಗ್ರಹವು ಧನುಸ್ಸು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ಮೂಲಕ ಧನುರ್ಮಾಸ ಸಂಪನ್ನನಾಗಲಿದೆ. ನಾಳೆಯಿಂದ ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗಲಿದೆ. ಚಂದ್ರನು ವೃಶ್ಚಿಕ ರಾಶಿಯ ಅನುರಾಧ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.