
ಈ ದಿನ ರಾಘವೇಂದ್ರ ಸ್ವಾಮಿ ಮಠದಲ್ಲಿ ವೃಂದಾವನಕ್ಕೆ ಹಾಕುವುದಕ್ಕೆ ತುಳಸೀ ಮಾಲೆಯನ್ನು ತೆಗೆದುಕೊಂಡು ಹೋಗಿ ಕೊಡಿ. ಒಂದು ವೇಳೆ ಸಾಧ್ಯವಾಗದೇ ಇದ್ದಲ್ಲಿ ರಾಘವೇಂದ್ರ ಸ್ವಾಮಿಗಳನ್ನು ನೆನಪಿಸಿಕೊಂಡು, ದೇವರ ಮನೆಯಲ್ಲಿ ಚಿತ್ರಪಟಕ್ಕಾದರೂ ತುಳಸಿ ದಳವನ್ನು ಅರ್ಪಿಸಿ.
ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮೊದಲು ಒಂದಕ್ಕೆ ನಾಲ್ಕು ಬಾರಿ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ ಬಳಿ ಇರುವ ವಾಹನದ ಮಾಡಿಫಿಕೇಷನ್ ಮಾಡಿಸಬೇಕು ಎಂದಿದ್ದಲ್ಲಿ ಸ್ವಲ್ಪ ಸಮಯಕ್ಕೆ ತೀರ್ಮಾನವನ್ನು ಮುಂದಕ್ಕೆ ಹಾಕಿ. ಇನ್ನು ಮುಂದೆ ಸಾಕಷ್ಟು ಮುಂದುವರಿದಿದ್ದೇವೆ, ಇನ್ನಾದರೂ ಕೆಲಸ ಮಾಡುವುದಷ್ಟೇ ಬಾಕಿ ಅಂತೇನಾದರೂ ಇದ್ದಲ್ಲಿ ಟ್ರೆಂಡ್ ಒಮ್ಮೆ ನೋಡಿಕೊಳ್ಳಿ.
ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಆಗಲಿ, ಮಾಡಿಕೊಡುತ್ತೇನೆ ಎಂದು ನೀವಾಗಿಯೇ ಭರವಸೆ ನೀಡಿದ್ದ ಕೆಲವು ಕಾರ್ಯಗಳನ್ನು ಅಂದುಕೊಂಡ ಸಮಯದಲ್ಲಿ ಪೂರ್ಣಗೊಳ್ಳುವುದು ಅಸಾಧ್ಯ ಎಂಬುದು ಖಚಿತವಾಗುತ್ತದೆ. ಆದರೆ ಈ ವಿಚಾರವನ್ನು ಹೇಗೆ ಹೇಳುವುದು ಎಂಬುದು ಇಕ್ಕಟ್ಟಿಗೆ ಸಿಲುಕಲಿದೆ. ಆರ್ಥಿಕ ವಿಚಾರಗಳಿಗೆ ಅಭದ್ರತೆ ಭಾವವೊಂದು ನಿಮ್ಮನ್ನು ಮುತ್ತಿಕೊಳ್ಳಲಿದೆ. ನಿಮ್ಮ ಉದ್ದೇಶವನ್ನು ಬದಲಿಸಿಕೊಳ್ಳುವುದಕ್ಕೆ ಸಾಧ್ಯವಿದ್ದಲ್ಲಿ ಆ ದಿಕ್ಕಿನ ಕಡೆಗೆ ಮುನ್ನಡೆಯಿರಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ.
ಲೇಖನ- ಸ್ವಾತಿ ಎನ್.ಕೆ.