‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಫಿನಾಲೆಗೆ ವೇದಿಕೆ ರೆಡಿ; ಯಾರಾಗ್ತಾರೆ ಚಾಂಪಿಯನ್?

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಫಿನಾಲೆಗೆ ವೇದಿಕೆ ರೆಡಿ; ಯಾರಾಗ್ತಾರೆ ಚಾಂಪಿಯನ್?


'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ಫಿನಾಲೆಗೆ ವೇದಿಕೆ ರೆಡಿ; ಯಾರಾಗ್ತಾರೆ?

ಜೀ ಕನ್ನಡದಲ್ಲಿ ಪ್ರಸಾರ ಆಗುವ ಡ್ಯಾನ್ಸ್ ಕರ್ನಾಟಕ ನೃತ್ಯ (DKD) ಮೂಲಕ ಅನೇಕ ಪ್ರತಿಭೆಗಳಿಗೆ ವೇದಿಕೆ ಸಿಕ್ಕಿದೆ.ಈಗ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 2025’ ಅಂತಿಮ ಹಂತ ತಲುಪಿದೆ. ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿಂದ 9:30 ರವರೆಗೆ ಫಿನಾಲೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ಈ ವೇಳೆ ವಿಜೇತರ ಹೆಸರನ್ನು ಘೋಷಿಸಲಾಗಿದೆ. ಈ ಬಾರಿಯ ಡಿಕೆಡಿ ಚಾಂಪಿಯನ್ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ. ಇದಕ್ಕೆ ಭಾನುವಾರ ರಾತ್ರಿ ಉತ್ತರ ಸಿಗಲಿದೆ.

ಈ ಬಾರಿ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಮೋಹಿತ್ ಮತ್ತು ಅನನ್ಯ, ಸಿದ್ದೇಗೌಡ್ರು ಮತ್ತು ದೀಶಲ್, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಫೈನಲಿಸ್ಟ್ ಆಗಿದ್ದಾರೆ. ಗ್ರಾಂಡ್ ಫಿನಾಲೆಯಲ್ಲಿ ಇವರ ನಡುವೆ ಪೈಪೋಟಿ.

ಇದನ್ನೂ ಓದಿ: ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1′ ಶೋ; ಜಡ್ಜ್ -ಸ್ಪರ್ಧಿ ಎರಡೂ ಸೂಪರ್

ಒಂದು ವೇದಿಕೆಯಿಂದ ಸ್ಪರ್ಧಿಗಳು ಕೇವಲ ಅವಕಾಶವನ್ನು ಮಾತ್ರ ಪಡೆಯುವುದಿಲ್ಲ. ಅವಕಾಶದ ಜೊತೆ ಹಿರಿಯರ ಮಾರ್ಗದರ್ಶನ ಕೂಡುತ್ತಾರೆ. ಯಾವ ಶಾಲೆಗಳೂ ಹೇಳಿಕೊಡದ ಪಾಠ ಇಲ್ಲಿ ಸಿಗುತ್ತದೆ. ಡಿಕೆಡಿ ಶೋನ ಸ್ಪರ್ಧಿಗಳಿಗೆ ಜಡ್ಜ್‌ಗಳಾದ ಡಾ. ಶಿವರಾಜ್ ಕುಮಾರ್, ರಚಿತಾ ರಾಮ್, ಅರ್ಜುನ್ ಜನ್ಯ ಮತ್ತು ವಿಜಯ್ ರಾಘವೇಂದ್ರ ಅವರ ಮಾರ್ಗದರ್ಶನ ಸಿಕ್ಕಿದೆ. ಈ ನಾಲ್ವರು ಸೆಲೆಬ್ರಿಟಿಗಳು ಈ ಬಾರಿಯ ಡಿಕೆಡಿ ಜಡ್ಜ್‌ಗಳಾಗಿದ್ದರು. ಅನುಶ್ರೀ ಅವರು ತಮ್ಮ ಮುದ್ದಾದ ಮಾತುಗಳಿಂದ ಆಯಂಕರಿಂಗ್ ಮಾಡುತ್ತಾ ಎಲ್ಲರನ್ನೂ ರಂಜಿಸಿದ್ದಾರೆ.

 

Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ

 

ಜೀ ಕನ್ನಡ (@zeekannada) ಹಂಚಿಕೊಂಡ ಪೋಸ್ಟ್

ಫಿನಾಲೆಯಲ್ಲಿರುವ ಎಲ್ಲಾ ಸ್ಪರ್ಧಿಗಳು ಸಾಕಷ್ಟು ಶ್ರಮ ಹಾಕಿ ಇಲ್ಲಿಯವರೆಗೆ ಬಂದಿದ್ದಾರೆ. ಜಡ್ಜ್‌ಗಳ ಮಾರ್ಗದರ್ಶನ ಕೂಡ ಇವರಿಗೆ ಸಹಕಾರಿ ಆಗಿದೆ. ಫಿನಾಲೆ ಎಪಿಸೋಡ್‌ನಲ್ಲಿ ಎಲ್ಲಾ ಜೋಡಿಗಳು ಪರ್ಫಾರ್ಮ್ ಮಾಡಿದ ನಂತರ ವಿನ್ನರ್ ಘೋಷಣೆ ಆಗಲಿದೆ. ಗೆದ್ದವರಿಗೆ ಪುನೀತ್ ರಾಜ್ ಕುಮಾರ್ ಅವರಿರೋ ಆಕರ್ಷಕ ಕಪ್ ಸಿಗಲಿದೆ. ಈ ಶೋ ಮುಗಿದ ಬಳಿಕ ಹೊಸ ರಿಯಾಲಿಟಿ ಶೋ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.





Source link

Leave a Reply

Your email address will not be published. Required fields are marked *