ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ; ಸೆಲ್​ನಲ್ಲೇ ನಡೆಯಿತು ದೊಡ್ಡ ಜಗಳ

ಸಹ ಕೈದಿಗಳಿಗೆ ದರ್ಶನ್ ದೈಹಿಕ ಕಿರುಕುಳ; ಸೆಲ್​ನಲ್ಲೇ ನಡೆಯಿತು ದೊಡ್ಡ ಜಗಳ


ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಆರಂಭದಲ್ಲಿ ಜಾಮೀನು ಹಾಯಾಗಿ ಹೊರಗೆ ಸುತ್ತಾಡಿದ ನಂತರ ಅವರು ಬೇಲ್ ರದ್ದುಗೊಳಿಸಿದ್ದರಿಂದ ಮರಳಿ ಜೈಲು ಸೇರಿದ್ದಾರೆ. ಈಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಿಯಮಗಳು ಕಠಿಣವಾಗಿದ್ದು, ದರ್ಶನ್ ತತ್ತರಿಸಿ ಹೋಗಿದ್ದಾರಂತೆ. ಸಹ ಕೈದಿಗಳಿಗೆ ಅವರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ಜೈಲಿನಲ್ಲಿ ಕಠಿಣ ನಿಯಮ

ದರ್ಶನ್ ಈ ಬಾರಿ ಜೈಲು ಸೇರಿದರೂ ಕಠಿಣ ನಿಯಮ ಜಾರಿಯಲ್ಲಿದೆ. ಜೊತೆಗೆ, ಇತ್ತೀಚೆಗೆ ಜೈಲಿನ ವಿಡಿಯೋ ಪಾರ್ಟಿ ವೈರಲ್ ಆಗಿದ್ದು ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಕಠಿಣ ನಿಯಮಗಳು ಜಾರಿಗೆ ಬಂದಿವೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಳ್ಳಬೇಕಾಗಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಾಗಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ.

ದರ್ಶನ್ ಜೊತೆ ಯಾರ್ಯಾರು ಇದ್ದಾರೆ?

ದರ್ಶನ್ ಜೊತೆ ಒಂದೇ ಸೆಲ್ ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದವರೇ. ನಾಗರಾಜು ಹಾಗೂ ಇತರ ಆರೋಪಿಗಳಿಗೆ ಮಾನಸಿಕ ದೈಹಿಕ ಹಿಂಸೆ ನೀಡುತ್ತಿದ್ದಾರೆ ದರ್ಶನ್.

ದೊಡ್ಡ ಜಗಳ

ಕೆಲ ದಿನದ ಹಿಂದೆ ದರ್ಶನ್ ಸೆಲ್ನಲ್ಲಿ ದೊಡ್ಡ ಜಗಳ ನಡೆದು ಹೋಗಿದೆ. ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳದಂತೆ ಆಗಿದೆ. ಇಬ್ಬರ ಜಗಳ ಜೋರಾಗಿರುವುದರಿಂದ ಜೈಲಾಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಪ್ರಕರಣಕ್ಕೆ ಕಾರಣ ಆಯ್ತು ಪ್ರದೋಷ್ ಹೇಳಿಕೆ

ಇಲ್ಲೇ ಇದ್ರೆ ಸಾಯ್ತೀನಿ ಎಂದ ಅನುಕುಮಾರ್

ವಕೀಲರ ನೇಮಕ ವಿಚಾರವಾಗಿಯೂ ಎಲ್ಲರ ನಡುವೆ ಗಲಾಟೆ ಶುರುವಾಗಿದೆ. ನಾನು ಇಲ್ಲಿದ್ದರೆ ಸಾಯೋದಾಗಿ ಅನುಕುಮಾರ್ ಹೇಳಿಸಿಕೊಂಡಾರಂತೆ. ಅನುಕುಮಾರ್‌ಗೆ ಜಾಮೀನು ಸಿಗುತ್ತಿಲ್ಲ ಎಂಬುದು ಒಂದು ಕಡೆಯಾದರೆ, ದರ್ಶನ್ ಚಿತ್ರಹಿಂಸೆ ತಡೆಯಲಾಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ಹೀಗಾಗಿ, ದರ್ಶನ್ ಸೆಲ್ ಮೇಲೆ ವಿಶೇಷ ಕಾಳಜಿ ಇಡಲಾಗಿದೆ. ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ಅವರು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.

ರಂದು ಪ್ರಕಟಿಸಲಾಗಿದೆ – 8:48 am, ಸೋಮ, 8 ಡಿಸೆಂಬರ್ 25



Source link

Leave a Reply

Your email address will not be published. Required fields are marked *