
ದಾವಣಗೆರೆ, ಮಾರ್ಚ್ 15: ಜಿಲ್ಲೆಯ ಆಹಾರ ಇಲಾಖೆಯ ಶಿರಸ್ತೇದಾರ ಅಜ್ಜಪ್ಪ ಅವರ ಕುಟುಂಬ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ತಂದೆಯ ಜೀವ ಉಳಿಸಲು ಪುತ್ರಿಯೊಬ್ಬಳು ಲಿವರ್ ದಾನ (ಅಂಗ ದಾನ) ಮಾಡಿದರೂ, ಚಿಕಿತ್ಸಾ ವೆಚ್ಚ ಹೆಚ್ಚಾಗಿ ಕುಟುಂಬ ಆತಂಕದಲ್ಲಿದೆ. ಅಜ್ಜಪ್ಪ ಅವರು ಅಂಗಾಂಗ ವೈಫಲ್ಯದಿಂದ ಗಂಭೀರವಾಗಿ ಅಸ್ವಸ್ಥರಾಗಿದ್ದರು, ಅವರ ಪುತ್ರಿ ಚಂದನಾ ಲಿವರ್ನ ಒಂದು ಭಾಗವನ್ನು ದಾನ ಮಾಡಿದರು. ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಚಂದನಾ ತಂದೆಯ ಜೀವ ಉಳಿಸಲು ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಕೈಕೊಟ್ಟ ಸಂಜೀವಿನಿ ಯೋಜನೆ
ಕಳೆದ ತಿಂಗಳು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಜ್ಜಪ್ಪನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಲಿವರ್ ಟ್ರಾನ್ಸ್ಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಸುಮಾರು 30 ಲಕ್ಷ ರೂಪಾಯಿ ವೆಚ್ಚವಾಗಿದೆ ಎಂದು ಕುಟುಂಬ ನಿರೀಕ್ಷಿಸಿತ್ತು. ಆದರೆ ಚಿಕಿತ್ಸೆ ಹಾಗೂ ಇತರೆ ವೆಚ್ಚಗಳನ್ನು ಸೇರಿಸಿ ಆಸ್ಪತ್ರೆಯ ಬಿಲ್ ಸುಮಾರು 57 ಲಕ್ಷ ರೂಪಾಯಿಗೆ ಏರಿಕೆಯಾಗಿದೆ.
ಇದನ್ನೂ ಓದಿ ದಾವಣಗೆರೆ ಬೈ ಎಲೆಕ್ಷನ್: ಬಿಜೆಪಿ ಮನೆಯೊಂದು 3 ಬಾಗಿಲು, ಕಾಂಗ್ರೆಸ್ ಮನೆಯೊಂದು ಎರಡು ಬಾಗಿಲು
ಆರೋಗ್ಯ ಸಂಜೀವಿನಿ ಯೋಜನೆ ಅನ್ವಯವಾಗುವುದಿಲ್ಲ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದರೆ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಜಗಳೂರು ಶಾಸಕ ಬಿ. ದೇವೇಂದ್ರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಒಂದು ಲಕ್ಷ ರೂಪಾಯಿ ವೈಯಕ್ತಿಕ ಸಹಾಯ. ಸಾರ್ವಜನಿಕರು ಸಹಾಯ ಮಾಡುವಂತೆ ಕುಟುಂಬ ಮನವಿ ಮಾಡಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.