
ದಾವಣಗೆರೆ, ಮಾರ್ಚ್ 23: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್ ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗದೇ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ಶಿಷ್ಯರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಬಹಿರಂಗವಾಗಿ ಬೆಂಬಲ ನೀಡಲಾಗಿದೆ. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ