
ಬೆಂಗಳೂರು, (ಏಪ್ರಿಲ್ 12): ದಾವಣಗೆರೆ ದಂಗಲ್ ತೀವ್ರ ಸ್ವರೂಪವಾಗಿದೆ. ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ (ದಾವಣಗೆರೆ ದಕ್ಷಿಣ ಉಪಚುನಾವಣೆ ಸಾಲು) ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಧಾನ ಸ್ಫೋಟಗೊಂಡಿದ್ದು, ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದ್ದು, ಇದೀಗ ಈ ರಾಜೀನಾಮೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅಂಗೀಕರಿಸಿದ್ದಾರೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ (ಕೆಪಿಸಿಸಿ ಅಲ್ಪಸಂಖ್ಯಾತ ಇಲಾಖೆ)ವಿಸರ್ಜಿಸಿ ಆದೇಶ ಹೊರಡಿಸಿದ್ದು, ಈ ಬೆಳವಣಿಗೆ ಕಾಂಗ್ರೆಸ್ ನಲ್ಲಿ ಭಾರೀ ಸಂಚಲನ ಮೂಡಿಸಿದೆ.
ರಾಜೀನಾಮೆ ಪರ್ವ ಬೆನ್ನಲ್ಲೇ ಅಲ್ಪಸಂಖ್ಯಾತರ ಘಟಕ ವಿಸರ್ಜನೆ
ಅಬ್ದುಲ್ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ರಾಜೀನಾಮೆ ಪರ್ವ ಶುರುವಾಗಿದೆ. ಮಹಮ್ಮದ್ ಸಿರಾಜ್ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷ ಹಾಗೂ ವಕ್ಫ ಮಂಡಳಿ ಮಾಜಿ ಅಧ್ಯಕ್ಷ. ಈ ಮೂರು ಜನ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕದ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್, ಹುಸೇನ್ ಉಕ್ಕಡಗಾತ್ರಿ ಬಿಡುಗಡೆ ಮಾಡಿದರು. ಇದರ ಬೆನ್ನಲ್ಲೇ ಎಚ್ಚೆತ್ತ ಡಿಕೆ ಶಿವಕುಮಾರ್ ಇಡೀ ಅಲ್ಪಸಂಖ್ಯಾತರ ಘಟಕವನ್ನೇ ವಿಸರ್ಜನೆ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್: ಸ್ವ ಇಚ್ಛೆಯಿಂದ ಹುದ್ದೆ ತೊರೆದಿದ್ದೇನೆ ಎಂದ ಪರಿಷತ್ ಸದಸ್ಯ
ದಾವಣಗೆರೆ ದಕ್ಷಿಣ ಉಪಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದವರ ತಲೆತಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾ ರಾಜೀನಾಮೆ ನೀಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ತಲೆದಂಡಕ್ಕೂ ಹೈಕಮಾಂಡ್ ಮುಂದಾಗಿದೆ. ಈ ಸಾಲಿನಲ್ಲಿ ಜಮೀರ್ ಅಹಮ್ಮದ್ ಖಾನ್ ಇದ್ದು, ಅವರ ಸಚಿವ ಸ್ಥಾನಕ್ಕೂ ಕುತ್ತು ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಇದು ಅಚ್ಚರಿಗೆ ಕಾರಣವಾಗಿದೆ.
ಮುಸ್ಲಿಂ ನಾಯಕರಲ್ಲಿ ಭಿನ್ನಮತ ಸ್ಫೋಟ
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಸಂಬಂಧ ಕಾಂಗ್ರೆಸ್ ನಾಯಕರಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಬಣ ರಾಜಕೀಯ ಸಹ ಶುರುವಾಗಿದೆ. ಡಿಕೆ ಶಿವಕುಮಾರ್ ಬಣದ ರಿಜ್ವಾನ್ ಅರ್ಷದ್, ಸಲೀಂ ಅಹಮ್ಮದ್ ಸುದ್ದಿಗೋಷ್ಠಿ ನಡೆಸಿ ಸಮುದಾಯದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ದಾವಣಗೆರೆ ಬೈ ಎಲೆಕ್ಷನ್ ನಮ್ಮ ಪಕ್ಷದ ಹಿರಿಯರು ಕೆಲಸ ಮಾಡಿಲ್ಲ ಎಂದು ಪರೋಕ್ಷವಾಗಿ ಸಚಿವ ಜಮೀರ್ ಅಹಮ್ಮದ್ ಖಾನ್, ಅಬ್ದುಲ್ ಜಬ್ಬರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಹೈಕಮಾಂಡ್ ಬಗ್ಗೆ ದೂರು ನೀಡಲಾಗಿದೆ. ಇದರ ಬೆನ್ನಲ್ಲೇ ಅಬ್ದುಲ್ ಜಬ್ಬರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರೊಂದಿಗೆ ಇದೀಗ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ರಾಜಕೀಯಕ್ಕೆ ಮುನ್ನುಡಿ ಬರೆ.
ಮೊನ್ನೆಯಷ್ಟೇ ಸಲೀಂ ಅಹ್ಮದ್, ರಿಜ್ವಾನ್ ಅರ್ಷದ್ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದರು.. ದಾವಣಗೆರೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧವೇ ಷಡ್ಯಂತ್ರ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳು ನಡೆದಿವೆ ಎಂಬ ಆರೋಪ ಕೇಳಿಬಂದಿತ್ತು.. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಆಂತರಿಕ ಬೆಳವಣಿಗೆ ಬಗ್ಗೆ ಹೈಕಮಾಂಡ್ ವರದಿ ನೀಡಿತ್ತು.. ಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ತ ವರದಿ ನೀಡಿದ್ರು. ಈ ಕೈ ಸೇರುವಂತೆ ಹೈಕಮಾಂಡ್ ಆ್ಯಕ್ಷನ್ ತೆಗೆದುಕೊಂಡಿದೆ. ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ಜಮೀರ್ ಆಪ್ತರು ನಜೀರ್ ಅಹ್ಮದ್‌ಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ತಾಕೀತು ಮಾಡಿದ್ದಾರೆ.
ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಮತ್ತು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಇಬ್ಬರು ಜಮೀರ್ ಆಪ್ತರು. ಹೀಗಾಗಿ ಮುಂದಿನ ಆ್ಯಕ್ಷನ್‌ಮೀರ್ ವಿರುದ್ಧವೇ ಎಂದು ಹೇಳಲಾಗ್ತಿದೆ.. ಯಾಕಂದ್ರೆ, ಜಮೀರ್ ಸೇರಿದಂತೆ ಹಲವು ಮುಸ್ಲಿಂ ಬಡಾವಣೆ ದಕ್ಷಿಣ ಕ್ಷೇತ್ರದ ಟಿಕೆಟ್‌ಗೆ ಅನ್ನ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಲಾಗಿದೆ. ಆದರೆ, ಸಮರ್ಥ್‌ಗೆ ಟಿಕೆಟ್ ಸಿಕ್ಕ ಕಾರಣ ಬೇಸರಗೊಂಡಿದ್ದ ಜಮೀರ್, ಪ್ರಚಾರದಿಂದ ದೂರ ಉಳಿದಿದ್ದರು. ಈಗ ಕ್ಷೇತ್ರದಲ್ಲಿ ಪ್ರಚಾರ ಮಾಡದ ಆರೋಪದಲ್ಲಿ ಜಮೀರ್ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಜಮೀರ್ ತಲೆತಂಡ ಖಚಿತವಾಗಿದೆ.
ಒಟ್ಟಿನಲ್ಲಿ ದಾವಣಗೆರೆ ದಕ್ಷಿಣದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಒಳಗಿನ ಬೇಗುದಿ ಸ್ಫೋಟಗೊಂಡಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.