Headlines

ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯ ಜತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ

ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯ ಜತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ


ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯೊಂದಿಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ

ದಾವಣಗೆರೆ, ಮಾ.19: ನಗರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ದಾವಣಗೆರೆಯ ಮಾರುಕಟ್ಟೆಯ ಮೇಲೆ ಭೀಕರವಾಗಿ ಪರಿಣಾಮ ಉಂಟು ಮಾಡಿದೆ. ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದಾರೆ, ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದ ಕೂಲಿಯೂ ಸಿಗದೆ ಒಡ್ಡಾಡಿದ್ದಾರೆ. ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿಗೆ ಕುಸಿದಿದೆ. ಉತ್ತಮ ಗಾತ್ರದ ಈರುಳ್ಳಿಗೂ ಕೇವಲ 10-12 ರೂಪಾಯಿ ಸಿಗುತ್ತಿದ್ದರೆ, ಸಣ್ಣ ಗಾತ್ರದ ಈರುಳ್ಳಿಗೆ 6-8 ರೂಪಾಯಿ ಮಾತ್ರ ಸಿಗುತ್ತಿದೆ.

ಜಾಗತಿಕ ಮಟ್ಟದಲ್ಲಿ ಇಂಧನ ಮತ್ತು ಸಿಲಿಂಡರ್ ಬೆಲೆ ಏರಿಕೆ, ಹಲವು ಹೋಟೆಲ್‌ಗಳ ವಹಿವಾಟು ಸ್ಥಗಿತಗೊಂಡಿದೆ. ಇದು ಈರುಳ್ಳಿಯ ಬೇಡಿಕೆಯ ಮೇಲೆ ನೇರ ಪರಿಣಾಮ ಬೀರಿದೆ. ಈರುಳ್ಳಿ ಬೆಲೆ ಕುಸಿದಿದ್ದರೆ, ಅದು ತುಂಬುವ ಖಾಲಿ ಚೀಲದ ಬೆಲೆ ಮಾತ್ರ 18 ರಿಂದ 20 ರೂಪಾಯಿಗೆ ಏರಿಕೆಯಾಗಿದೆ. ರೈತರು ಈರುಳ್ಳಿಯ ಜೊತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಅಬ್ಬರ: ಕಾಶ್ಮೀರದಂತಾದ ಮಲೆನಾಡು; ರೈತರಿಗೆ ತಪ್ಪಿದ ಬೆಳೆ ಹಾನಿ ಸಂಕಷ್ಟ!

ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ಕೊಪ್ಪಳ, ಬಳ್ಳಾರಿ, ವಿಜಯಪುರ ಮತ್ತು ಹೊಸಪೇಟೆಯಿಂದ ನೂರಾರು ಕ್ವಿಂಟಾಲ್ ಈರುಳ್ಳಿ ಹೊತ್ತು ತಂದ ರೈತರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳೀಯವಾಗಿ ಬೆಳೆದ ಈರುಳ್ಳಿಗೆ ನಾಸಿಕ್ ಈರುಳ್ಳಿಯ ಅರ್ಧದಷ್ಟು ದರವೂ ಸಿಗುತ್ತಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *